ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ

KannadaprabhaNewsNetwork |  
Published : Jan 31, 2024, 02:23 AM IST
೩೦ವೈಎಲ್‌ಬಿ೧:ಯಲಬುರ್ಗಾದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ರಾಷ್ಟ್ರೀಪಿತ ಮಹಾತ್ಮಗಾಂಧಿಜಿ ಅವರ ಹುತಾತ್ಮ ದಿನಾಚರಣೆ ನಿಮಿತ್ತ ಒಂದು ನಿಮಿಷ ಮೌನಾಚರಣೆ ಮಾಡಿ ಸ್ವಚ್ಚತಾ ಜಾಗೃತಿ ಅಭಿಯಾನ ಜರುಗಿತು. | Kannada Prabha

ಸಾರಾಂಶ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಅದರಂತೆ ನಾವು ಕೂಡ ಸ್ವಚ್ಛತೆಗೆ ಕೈಜೋಡಿಸುವ ಕಾರ್ಯಕ್ಕೆ ಅಣಿಯಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ಎಲ್ಲರದ್ದಾಗಿದ್ದು, ಹೆಚ್ಚು ಗಿಡ-ಮರ ಬೆಳೆಸುವಲ್ಲಿ ಸಾರ್ವಜನಿಕರು ಮುಂದಾಗಬೇಕು

ಯಲಬುರ್ಗಾ: ಸ್ವಚ್ಛತೆಯಿಂದ ಆರೋಗ್ಯಕರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಪಪಂ,ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ನ್ಯಾಯಾಂಗ ಇಲಾಖೆ, ತಾಲೂಕು ನ್ಯಾಯವಾದಿಗಳ ಸಂಘ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಹುತಾತ್ಮ ದಿನಾಚರಣೆ ನಿಮಿತ್ತ ಒಂದು ನಿಮಿಷ ಮೌನಾಚರಣೆ ಮಾಡಿ ಸ್ವಚ್ಛತಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಅದರಂತೆ ನಾವು ಕೂಡ ಸ್ವಚ್ಛತೆಗೆ ಕೈಜೋಡಿಸುವ ಕಾರ್ಯಕ್ಕೆ ಅಣಿಯಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ಎಲ್ಲರದ್ದಾಗಿದ್ದು, ಹೆಚ್ಚು ಗಿಡ-ಮರ ಬೆಳೆಸುವಲ್ಲಿ ಸಾರ್ವಜನಿಕರು ಮುಂದಾಗಬೇಕು ಎಂದರು.

ಪಪಂ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಸಾರ್ವಜನಿಕರು ವೈಜ್ಞಾನಿಕ ಪದ್ಧತಿಯಲ್ಲಿ ಕಸ ವಿಲೇವಾರಿ ಮಾಡುವುದನ್ನು ಅಳವಡಿಸಿಕೊಳ್ಳಬೇಕು. ಪಪಂದೊಂದಿಗೆ ತಾವೂ ಕೂಡ ಕೈಜೋಡಿಸುವ ಮೂಲಕ ಪಟ್ಟಣದಲ್ಲಿ ಸ್ವಚ್ಛತೆ ಕಾರಣರಾಗಬೇಕು ಎಂದು ಮನವಿ ಮಾಡಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್ ಶ್ಯಾಗೋಟಿ, ಉಪಾಧ್ಯಕ್ಷ ಎಚ್.ಎಚ್.ಹಿರೇಮನಿ ಮಾತನಾಡಿದರು.

ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ, ವಕೀಲ ಶಂಕರಗೌಡ ಗೆದಗೇರಿ, ಆರ್.ಜಿ.ಕುಷ್ಟಗಿ ಶೆಟ್ಟರ್, ಭರಮಗೌಡರ, ಎಸ್.ವಿ. ಶಶಿಮಠ, ಕೆ.ಆರ್. ಬೆಟಗೇರಿ, ನಾಗರಾಜ, ಶಶಿಧರ ಶ್ಯಾಗೋಟಿ, ಎ.ಎಂ. ಪಾಟೀಲ, ಜಿ.ಕೆ. ಲಾಲಗೊಂಡರ, ಎಚ್.ಎ.ನಡುವಲಮನಿ, ಮಂಜುನಾಥ, ಡಿ.ಎಚ್.ನದಾಫ್, ರಾಘವೇಂದ್ರ ಕೋಳಿಹಾಳ, ವಿನಾಯಕ ಸೇರಿದಂತೆ ನ್ಯಾಯಾಂಗ ಇಲಾಖೆ, ಪಪಂ ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ