ಹೊಸಪೇಟೆ: ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಜಯನಗರ, ಕಾನೂನು ಸೇವೆ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳು, ಜಿಲ್ಲಾ ಮಕ್ಕಳ ಸಹಾಯವಾಣಿ ವಿಜಯನಗರ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ, ಕಾನೂನು ಬದ್ಧ ದತ್ತು ಕುರಿತ ಅರಿವು ಮೂಡಿಸುವ ಕಾರ್ಯಕ್ರಮ ನಗರದ ಆರೋಗ್ಯ ಇಲಾಖೆಯಲ್ಲಿ ಇತ್ತೀಚೆಗೆ ನಡೆಯಿತು.ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ ಉದ್ಘಾಟಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು. ದತ್ತು ಪಡೆಯುವುದು ಹಾಗೂ ನೀಡುವುದು ಈಗ ಕಾನೂನು ಬದ್ಧವಾಗಿದೆ. ಕಾನೂನು ಮೀರಿ ಯಾರೂ ನಡೆದುಕೊಳ್ಳಬಾರದು. ಎಲ್ಲರಿಗೂ ಕಾನೂನಿನ ಅರಿವು ಅತಿ ಮುಖ್ಯ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ, ಮಕ್ಕಳ ಹಕ್ಕುಗಳು ಹಾಗೂ ದತ್ತು ಪಡೆಯಲು ಇರುವ ಕಾನೂನಿನ ಕುರಿತು ವಿಷಯ ಮಂಡಿಸಿದರು. ಸರ್ಕಾರಿ ವಿಶೇಷ ದತ್ತುಸಂಸ್ಥೆಯ ಜಿಲ್ಲಾ ಸಂಯೋಜಕಿ ವಿದ್ಯಾಬಾಯಿ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಷಣ್ಮುಖ, ಪಂಪಾಪತಿ, ಯಶೋಧಾ, ನೇತ್ರಾವತಿ, ಬಷೀರ, ಲಲಿತಾ ಮತ್ತಿತರರಿದ್ದರು.
ಹೊಸಪೇಟೆಯಲ್ಲಿ ನಡೆದ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ, ಕಾನೂನು ಬದ್ಧ ದತ್ತು ಕುರಿತ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ ಮಾತನಾಡಿದರು.