ಸದೃಢ ಭಾರತ ಕಟ್ಟೋಣ: ಡಾ. ರೇವತಿ ಆರ್. ನಾಯ್ಕ

KannadaprabhaNewsNetwork |  
Published : Oct 03, 2024, 01:32 AM IST
ಫೋಟೋ : ೨ಕೆಎಂಟಿ_ಒಸಿಟಿ_ಕೆಪಿ೧ : ಗಾಂಧಿ ಜಯಂತಿ ಉದ್ದೇಶಿಸಿ ರೇವತಿ ನಾಯ್ಕ ಮಾತನಾಡಿದರು. ಅರವಿಂದ ನಾಯ್ಕ ಇತರರು ಇದ್ದರು.   | Kannada Prabha

ಸಾರಾಂಶ

ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು.

ಕುಮಟಾ: ಮಹಾತ್ಮ ಗಾಂಧೀಜಿ, ಲಾಲ್ ಬಹದೂರ್ ಶಾಸ್ತ್ರಿ ಮೊದಲಾದ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸದೃಢ ದೇಶವನ್ನು ನಿರ್ಮಾಣ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ನಾವೆಲ್ಲರೂ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ಭಾರತವನ್ನು ಕಟ್ಟಲು ಶ್ರಮಿಸಬೇಕು ಎಂದು ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ರೇವತಿ ಆರ್. ನಾಯ್ಕ ತಿಳಿಸಿದರು.ಇಲ್ಲಿನ ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ ನಮ್ಮ ಮೈಮನಗಳಲ್ಲಿ ಅವರ ಆದರ್ಶಗಳನ್ನ ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ವ್ಯವಹಾರಿಕ ಬದುಕಿನಲ್ಲಿ ದೇಶ, ಭಾಷೆ ಇತ್ಯಾದಿ ವಿಷಯಗಳ ಕುರಿತು ಆಸಕ್ತಿ ಕಡಿಮೆಯಾಗುತ್ತಿದ್ದು, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳು ಇತ್ಯಾದಿಗಳ ಹಾವಳಿಯಲ್ಲಿ ದೇಶದ ಕುರಿತು ಚಿಂತಿಸುವ ಮನಸ್ಸುಗಳು ಕಡಿಮೆಯಾಗುತ್ತಿವೆ ಎಂದರು.ಯುನಿಯನ್ ಕಾರ್ಯಾಧ್ಯಕ್ಷ ಡಾ. ಅರವಿಂದ ನಾಯಕ, ಭಾರತೀ ಸಂಸ್ಥೆ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶ್ರೀನಿವಾಸ್ ಎಚ್., ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ ವೆರ್ಣೆಕರ್ ಇತರರು ಇದ್ದರು. ನಂತರ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.

ಗಾಂಧೀಜಿ ವಿಚಾರಧಾರೆ ಸಾರ್ವಕಾಲಿಕ

ಹೊನ್ನಾವರ: ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅವಹೇಳಕಾರಿ ಅಂಶಗಳು ಹರಿದಾಡುತ್ತಿವೆ. ಗಾಂಧೀಜಿ ಹೆಚ್ಚು ಟ್ರೋಲ್‌ಗೆ ಒಳಗಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸ್ತ್ರೀರೋಗ ತಜ್ಞ ಡಾ. ಕೃಷ್ಣ ಜಿ. ತಿಳಿಸಿದರು.ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಗಾಂಧೀಜಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅರೆಬರೆ ಮಾಹಿತಿಗಳನ್ನು ನಂಬಬೇಡಿ. ಅವರ ಬಗ್ಗೆ ಬಂದಿರುವ ಉತ್ತಮ ಪುಸ್ತಕಗಳನ್ನು ಓದಿ ಸರಿಯಾಗಿ ಅರ್ಥೈಸಿಕೊಳ್ಳಬೇಕು. ವರ್ಷದಿಂದ ವರ್ಷಕ್ಕೆ ಗಾಂಧಿ ಹೆಚ್ಚು ಪ್ರಸ್ತುತರಾಗುತ್ತಾರೆ. ಸುಳ್ಳು ಮಾಹಿತಿಗಳನ್ನು ನಂಬಿ ಗಾಂಧೀಜಿಯನ್ನು ಲಘುವಾಗಿ ಪರಿಗಣಿಸಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜೇಶ ಕಿಣಿ, ಶುಶ್ರೂಷಾಧಿಕಾರಿ ಮಂಗಲಾ ನಾಯ್ಕ ಮಾತನಾಡಿದರು. ಸಹಾಯಕ ಆಡಳಿತಾಧಿಕಾರಿ ಶಶಿಕಲಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ