ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ: ಡಾ.ನೂರಲ್ ಹುದಾ

KannadaprabhaNewsNetwork |  
Published : Aug 15, 2025, 01:00 AM IST
ನರಸಿಂಹರಾಜಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ದಿ.ದೇವಡಾಜ ಅರಸು ಅವರ 110 ನೇ ಜಯಂತಿ ಆಚರಿಸುವ ಬಗ್ಗೆ ತಹಶೀಲ್ದಾರ್ ಡಾ. ನೂರಲ್‌ ಹುದಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ನರಸಿಂಹರಾಜಪುರ, ನಾಡಿನಲ್ಲಿ ಸಾಮಾಜಿಕ, ಆರ್ಥಿಕ ಬದಲಾವಣೆ ತಂದ ಮಾಜಿ ಮುಖ್ಯ ಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಹಸೀಲ್ದಾರ್ ಡಾ. ನೂರಲ್ ಹುದಾ ತಿಳಿಸಿದರು.

- ತಾಲೂಕು ಕಚೇರಿಯಲ್ಲಿ ದೇವರಾಜ ಅರಸು ಜನ್ಮ ಜಯಂತಿ ಪೂರ್ವಭಾವಿ ಸಭೆ

ಕನ್ನಡಪ್ರಭ ವರ್ತೆ, ನರಸಿಂಹರಾಜಪುರ

ನಾಡಿನಲ್ಲಿ ಸಾಮಾಜಿಕ, ಆರ್ಥಿಕ ಬದಲಾವಣೆ ತಂದ ಮಾಜಿ ಮುಖ್ಯ ಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಹಸೀಲ್ದಾರ್ ಡಾ. ನೂರಲ್ ಹುದಾ ತಿಳಿಸಿದರು.

ಗುರುವಾರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯ ಮಂತ್ರಿ ದಿ. ಡಿ.ದೇವರಾಜ ಅರಸು 110 ನೇ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟೀಯ ಹಬ್ಬಗಳ ಪೂರ್ವಭಾವಿ ಸಭೆಗಳಿಗೆ ಪ್ರತಿಯೊಬ್ಬ ಅಧಿಕಾರಿಗಳು ಭಾಗವಹಿಸಬೇಕು. ಭಾಗವಹಿಸದವರಿಗೆ ತಿಳುವಳಿಕೆ ನೋಟೀಸು ನೀಡಲಾಗುವುದು ಎಂದು ಎಚ್ಚರಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಮಾತನಾಡಿ, ದೇವರಾಜು ಅರಸು ಸಾಮಾಜಿಕ ಹರಿಕಾರರಾಗಿದ್ದರು. ರಾಷ್ಟೀಯ ಹಬ್ಬಗಳಿಗೆ, ಪೂರ್ವ ಭಾವಿ ಸಭೆಗಳಿಗೆ ಪ್ರತಿಯೊಬ್ಬ ಅಧಿಕಾರಿಗಳು ಬರಬೇಕು. ರಾಷ್ಟೀಯ ಹಬ್ಬಗಳಿಗೆ ಸರ್ಕಾರಿ ರಜೆ ಇರುತ್ತದೆ. ಆದರೂ ಭಾಗವಹಿಸುವುದಿಲ್ಲ. ರಾಷ್ಟೀಯ ಹಬ್ಬಗಳಿಗೆ ಭಾಗವಹಿಸದೆ ಇರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆ.20 ರಂದು ದೇವರಾಜು ಅರಸು ಭವನದಲ್ಲಿ ಜಯಂತಿ ಆಚರಿಸಲು ತೀರ್ಮಾನಿಸಲಾಯಿತು. ದೇವರಾಜು ಅರಸು ಬಗ್ಗೆ ಮಾತನಾಡಲು ಉಪನ್ಯಾಸಕರನ್ನು ಆಹ್ವಾನಿಸುವುದು ಹಾಗೂ ಹಿಂದುಳಿದ ವಸತಿ ನಿಲಯದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಲು ಸಭೆಯಲ್ಲಿ ತೀರ್ಮಾನಿಸಿತು. ಸಭೆಯಲ್ಲಿ ಆರಕ್ಷಕ ವೃತ್ತ ನಿರೀಕ್ಷಿಕ ಗುರುದತ್ ಕಾಮತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಧರ್ಮರಾಜ್, ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ವಾಲ್ಮೀಕಿ ಸಂಘದ ಕ್ಷೇತ್ರ ಅಧ್ಯಕ್ಷ ಶ್ರೀನಿವಾಸ್, ಡಿಎಸ್.ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಡಿ.ರಾಮು, ಡಿಎಸ್.ಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ದೇವರಾಜ್, ಡಿಎಸ್.ಎಸ್ ನಗರ ಘಟಕದ ಸಂಚಾಲಕ ಪಿಕಪ್ ಚಂದ್ರು, ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ವರುಣ ಸಿ. ಶೆಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಪಾಲ್ಗೊಂಡಿದ್ದರು.

PREV

Recommended Stories

79 ವರ್ಷಗಳ ನಂತ್ರ ಅಥಣಿಗೆ ಸರ್ಕಾರಿ ಪ್ರೌಢಶಾಲೆ!
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ