ಸ್ವಾತಂತ್ರ್ಯೋ ತ್ಸವ ಅದ್ಧೂರಿಯಾಗಿ ಆಚರಿಸೋಣ

KannadaprabhaNewsNetwork |  
Published : Aug 08, 2025, 01:00 AM IST
ಚಿತ್ರ 7ಬಿಡಿಆರ್63 | Kannada Prabha

ಸಾರಾಂಶ

ಪ್ರತಿ ವರ್ಷದಂತೆ ಈ ವರ್ಷವೂ ಆ.15 ರಂದು ಸ್ವಾತಂತ್ರ್ಯೋತ್ಸವ ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ಪ್ರತಿ ವರ್ಷದಂತೆ ಈ ವರ್ಷವೂ ಆ.15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗುರುವಾರ ಕರೆದ ಸ್ವಾತಂತ್ರ್ಯೋಂತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ತಾವು ತಯ್ಯಾರಿ ಮಾಡಿಕೊಂಡ ಮಾಹಿತಿಯನ್ನು ನೀಡಬೇಕು ಹಾಗೂ ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲೂ ಧ್ವಜ ತಲೆ ಕೆಳಗಾಗದಂತೆ ನೋಡಿಕೊಳ್ಳಬೇಕೆಂದರು.

ಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಗೆ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಛೇರಿ ಮತ್ತು ಶಾಲಾ- ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರೂ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8:45 ಕ್ಕೆ ಬಂದು ಸೇರಬೇಕು ಬೆಳಿಗ್ಗೆ 9 ಗಂಟೆಗೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರುತ್ತದೆ. ಆಗಸ್ಟ್ 14 ಮತ್ತು 15 ರಂದು ಎರಡು ದಿನ ಎಲ್ಲಾ ಸರ್ಕಾರಿ ಕಛೇರಿಗಳ ಮೇಲೆ ದೀಪಾಲಂಕಾರ ಮಾಡಬೇಕೆಂದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಅದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ. ಲೋಕೋಪಯೋಗಿ ಇಲಾಖೆಯವರು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಳೆ ನೀರು ನಿಲ್ಲದಂತೆ ಮತ್ತು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು.

ನಗರಸಭೆಯಿಂದ ಕ್ರೀಡಾಂಗಣದ ಸ್ವಚ್ಚತೆ ಮತ್ತು ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆಯಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ದೆಗಳನ್ನು ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಶಿಷ್ಠಾಚಾರ ಪಾಲನೆ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ ನಡೆಯಿತು.

ಈ ಸಭೆಯಲ್ಲಿ ಜಿ.ಪಂ ಸಿಇಓ ಡಾ. ಗಿರೀಶ್ ಬದೋಲೆ, ಎಸ್ಪಿ ಪ್ರದೀಪ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಬೀದರ ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ಪಿಯು ಡಿಡಿ ಚಂದ್ರಕಾಂತ ಶಾಬಾದಕರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ