ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ

KannadaprabhaNewsNetwork |  
Published : Aug 03, 2024, 12:43 AM IST
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ನಡೆಸಿದರು. | Kannada Prabha

ಸಾರಾಂಶ

ಆ.೧೫ ರಂದು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಆ.೧೫ ರಂದು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಬಹು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ, ವಹಿಸಿದ ಎಲ್ಲ ಕಾರ್ಯಗಳನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿ ಅಂದು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಆಹಾರ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವ್ವಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಬಸವರಾಜ ಕುಂಬಾರ, ಪ್ರಾದೇಶಿಕ ಅರಣ್ಯ ವಿಭಾಗದ ಉಪಸಂರಕ್ಷಣಾಧಿಕಾರಿ ಶಿವಶರಣಯ್ಯ.ಕೆ, ಪ್ರಾದೇಶಿಕ ಸಾರಿಗೆಯ ಅಧಿಕಾರಿ ಆನಂದ ಪಾರ್ಥನಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿಕ್ಷಾಣಧಿಕಾರಿ ಅಶೋಕ ಲಿಮಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿ ಅಡಿವೆಪ್ಪ ಸಾಲಗಲ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮೆರೆಕರ, ಗಿರೀಶ ಕುಲಕರ್ಣಿ ಮುಂತಾದವರು ಇದ್ದರು.

ಪ್ಲಾಸ್ಟಿಕ್ ಧ್ವಜ ಮಾರಾಟ ನಿಷೇಧ

ಜಿಲ್ಲೆಯಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಹಾಗೂ ಬಳಸದಂತೆ ತಿಳಿಸಿದ ಅವರು ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು.

ಟಿ.ಭೂಬಾಲನ್,
ಜಿಲ್ಲಾಧಿಕಾರಿಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಸು ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ: ಸಿದ್ದರಾಮಯ್ಯ
ಅವಕಾಶ ಬಳಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ