ಒಮ್ಮತದಿಂದ ಮಹನೀಯರ ಜಯಂತ್ಯುತ್ಸವ ಆಚರಿಸೋಣ

KannadaprabhaNewsNetwork |  
Published : Apr 03, 2026, 01:30 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್‌ ಹಾಗೂ ಜಗಜೀವನರಾಮ್‌ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ದೇಶದ ಮೊದಲ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಜಯಂತಿಯನ್ನು ಸಮಾಜದ ಎಲ್ಲ ಮುಖಂಡರ ಒಮ್ಮತದ ಸಹಕಾರದಿಂದ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು

ದೊಡ್ಡಬಳ್ಳಾಪುರ: ದೇಶದ ಮೊದಲ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಜಯಂತಿಯನ್ನು ಸಮಾಜದ ಎಲ್ಲ ಮುಖಂಡರ ಒಮ್ಮತದ ಸಹಕಾರದಿಂದ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಗಜೀವನರಾಮ್‌ ಮತ್ತು ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಏ.5ರಂದು ಡಾ. ಬಾಬು ಜಗಜೀವನ ರಾಂ 119ನೇ ಜಯಂತಿ ಹಾಗೂ 14ರಂದು ಡಾ. ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಆಚರಿಸಲಾಗುತ್ತಿದೆ. ಇಬ್ಬರೂ ಮಹನೀಯರ ಆದರ್ಶಗಳು, ಸಮಾಜಮುಖಿ ಚಿಂತನೆಗಳು ಹಾಗೂ ಸಮಾನತೆಗಾಗಿ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಗೌರವಯುತವಾಗಿ ಆಚರಿಸಬೇಕು. ಸಮಾಜದ ಮುಖಂಡರೆಲ್ಲರು ಮಹನೀಯರ ಜಯಂತಿಯನ್ನು ಯಾವ ರೀತಿ ಆಚರಣೆ ಮಾಡಬೇಕು ಎಂಬ ಬಗ್ಗೆ ಒಮ್ಮತದ ತೀರ್ಮಾನ ಕೈಗೊಂಡು, ಜಿಲ್ಲಾಡಳಿತಕ್ಕೆ ತಿಳಿಸಿದರೆ ಅದೇ ರೀತಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್‌ ಪುತ್ಥಳಿ:

ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಶೀಘ್ರದಲ್ಲೇ ಆಗಲಿದೆ. ಮುಖ್ಯಮಂತ್ರಿಗಳಿಂದ ಉದ್ಘಾಟನೆ ಆಗಬೇಕು ಎಂಬ ಸಮುದಾಯದ ಬೇಡಿಕೆಯಂತೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಮತ್ತೊಮ್ಮೆ ಚರ್ಚಿಸಿ ದಿನಾಂಕ ನಿಗದಿ ಪಡಿಸಿ ತಿಳಿಸಲಾಗುವುದು. ಏಪ್ರಿಲ್ 14ರೊಳಗೆ ಪುತ್ಥಳಿ ಲೋಕಾರ್ಪಣೆಗೊಳಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

2ಕೆಡಿಬಿಪಿ1- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್‌ ಹಾಗೂ ಜಗಜೀವನರಾಂ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನೆಗಾಡು ಸೋಲಿಗರ ಹಾಡಿಗೆ ಕೊನೆಗೂ ಹರಿದ ಗಂಗೆ
ನಾಯಕತ್ವ ವೃದ್ಧಿಗೆ ವಿದ್ಯಾರ್ಥಿ ಸಂಸತ್ತು ಸಹಕಾರಿ: ಪ್ರೊ. ಜೆ.ಎಂ. ನಾಗಯ್ಯ