ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದ ಶಿವಯೋಗಿ ಸಿದ್ದರಾಮ, ಮಹಾಯೋಗಿ ವೇಮನ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.15ರಂದು ಶಿವಯೋಗಿ ಸಿದ್ದರಾಮ ಜಯಂತಿ ಆಚರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿದ್ದರಾಮೇಶ್ವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದವರೆಗೆ ಸಿದ್ದರಾಮೇಶ್ವರ ಭಾವಚಿತ್ರದ ಮೆರವಣಿಗೆ ನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಅಂದು ಸರ್ಕಾರಿ ಅರೆ ಸರ್ಕಾರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.ಮಹಾಯೋಗಿ ವೇಮನ ಜಯಂತಿ ಜ.19ರಂದು ಆಚರಿಸಲಾಗುತ್ತಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೇಮನರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಅಲ್ಲಾಪುರ ರಸ್ತೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದವರೆಗೆ ವೇಮನರ ಭಾವ ಚಿತ್ರದ ಮೆರವಣಿಗೆ ನಡೆದ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲಾಡಳಿತ ಬೀದರ್ ಹಾಗೂ ಎಲ್ಲರೂ ಸೇರಿ ಈ ಮಹಾನ್ ಶರಣರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸೋಣ. ಮೆರವಣಿಗೆ ಕಾರ್ಯಕ್ರಮದಲ್ಲಿ ಕಲಾ ತಂಡಗಳ ವ್ಯವಸ್ಥೆ ಕನ್ನಡ ಮತ ಸಂಸ್ಕೃತಿ ಇಲಾಖೆಯಿಂದ ಮಾಡಬೇಕು ಹಾಗೂ ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ನಗರ ಸಭೆ ವತಿಯಿಂದ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.