ಕನ್ನಡಪ್ರಭ ವಾರ್ತೆ ಯಾದಗಿರಿ
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಮಾಜದ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ, ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಮೂಡಿಸಿ ಉತ್ತೇಜಿಸಲು ಹಾಗೂ ಮಾನವ ಜೀವಕ್ಕೆ ಮತ್ತು ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚಿತ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರಮಾಣ ವಚನ ಸ್ವೀಕರಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಚುನಾವಣೆ ತಹಸೀಲ್ದಾರ್ ಸಂತೋಷರಾಣಿ ಸೇರಿದಂತೆ ಕಚೇರಿಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿದ್ದರು.