ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಪ್ರತಿಷ್ಠೆ ಬಿಡಲಿ: ಬೊಮ್ಮಾಯಿ

KannadaprabhaNewsNetwork |  
Published : Jun 24, 2026, 03:15 AM IST
ಬಸವರಾಜ ಬೊಮ್ಮಾಯಿ | Kannada Prabha

ಸಾರಾಂಶ

ಸರ್ಕಾರದ ಬಳಿ ಸಾಕಷ್ಟು ಜಮೀನಿದೆ. ಕೋಲಾರ, ಚಿಕ್ಕಬಳ್ಳಾಪುರ ಏರಿಯಾದಲ್ಲಿ 2 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ. ಅಲ್ಲಿ ಟೌನ್‌ಶಿಪ್ ಮಾಡಬೇಕು.

ಗದಗ: ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರತಿಷ್ಠೆ ತೋರದೇ ರೈತರಿಗೆ ತೊಂದರೆಯಾಗದಂತೆ ಸರ್ಕಾರಿ ಜಮೀನಿನಲ್ಲೇ ಟೌನ್‌ಶಿಪ್ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಳಿ ಸಾಕಷ್ಟು ಜಮೀನಿದೆ. ಕೋಲಾರ, ಚಿಕ್ಕಬಳ್ಳಾಪುರ ಏರಿಯಾದಲ್ಲಿ 2 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ. ಅಲ್ಲಿ ಟೌನ್‌ಶಿಪ್ ಮಾಡಬೇಕು. ಸರ್ಕಾರದ ಭೂಮಿ ಇರುವ ಜಾಗದಲ್ಲಿ ಮಾಡಿ ಅದಕ್ಕೆ ಸಕಲ ವ್ಯವಸ್ಥೆಗಳನ್ನು ಒದಗಿಸಬೇಕು. ಅದನ್ನು ಬಿಟ್ಟು ರೈತರ ಜಮೀನನ್ನು ತೆಗೆದುಕೊಳ್ಳುವುದು ಸಮಂಜಸವಲ್ಲ. ಸಿಎಂ ಡಿಕೆಶಿ ವಿಧಾನಸೌಧದಲ್ಲಿ ಚರ್ಚೆಗೆ ಬನ್ನಿ ಎನ್ನುವ ಪ್ರತಿಷ್ಠೆಗಳನ್ನು ಬಿಟ್ಟರೆ ಅದಕ್ಕೊಂದು ಪರಿಹಾರ ಇದೆ ಎಂದರು.

ಬರ ಘೋಷಿಸಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ಇದು ಸಂಪೂರ್ಣವಾಗಿ ಬರಗಾಲದ ಪರಿಸ್ಥಿತಿಯನ್ನು ತೋರಿಸುತ್ತಿದೆ. ಮೊದಲು ಬರಗಾಲ ಘೋಷಣೆ ಮಾಡಿದರೆ ಮುಂದಿನ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ರಾಜ್ಯ ಸರ್ಕಾರ ಬರಗಾಲದ ಘೋಷಣೆ ಮಾಡಬೇಕು ಎಂದರು.

ಹುಬ್ಬಳ್ಳಿ- ಗದಗ ಬೈಪಾಸ್ ಮೂಲಕ ಪ್ಯಾಸೆಂಜರ್ ರೈಲು ಹಾದು ಹೋಗುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೂಡ್ಸ್ ಗಾಡಿ ಬೈಪಾಸ್ ಮೂಲಕ ಹೋಗಲು ತಕರಾರಿಲ್ಲ. ಪ್ಯಾಸೆಂಜರ್ ರೈಲುಗಳ ಬದಲಾವಣೆಯಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಹೋರಾಟ ಮಾಡಲು ಸಿದ್ಧ. ಅಲ್ಲದೇ ಕೇಂದ್ರದ ಸಚಿವರಿಗೆ ಪತ್ರ ಬರೆದು ಈ ಆದೇಶವನ್ನು ವಾಪಸ್ ಪಡೆಯುವಂತೆ ಪ್ರಯತ್ನ ಮಾಡುತ್ತೇನೆ ಎಂದರು. ​

ನೀಟ್ ತಪ್ಪಿತಸ್ಥರಿಗೆ ಶಿಕ್ಷೆ: ​ನೀಟ್ ಪರೀಕ್ಷೆ ವಿವಾದದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದರಲ್ಲಿ ಕೇಂದ್ರದಿಂದ ತಪ್ಪಾಗಿಲ್ಲ. ಕೆಲವು ಜನ ತಮ್ಮ ಆಸೆಗಾಗಿ ಇದನ್ನು ಮಾಡಿದ್ದಾರೆ. ತಪ್ಪಿತಸ್ಥರರನ್ನು ಬಂಧಿಸಲಾಗಿದೆ ಎಂದರು. ಇಂದು ಕೈತೋಟ ನಿರ್ಮಾಣ ತರಬೇತಿ

ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕ ಹಾಗೂ ಅಕ್ಕನ ಬಳಗದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮನೆಯ ಪ್ರಾಂಗಣದಲ್ಲಿ ಕೈತೋಟ ನಿರ್ಮಾಣ ತರಬೇತಿ ಕಾರ್ಯಕ್ರಮ ಜೂ. 24ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಜರುಗಲಿದೆ.ಮುಖ್ಯ ಅತಿಥಿಗಳಾಗಿ ಬಾಗಲಕೋಟೆಯ ತೋಟಗಾರಿಕಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕ ಡಾ. ಸತೀಶ ಆರ್. ಪಾಟೀಲ, ಬಾಗಲಕೋಟೆಯ ತೋಟಗಾರಿಕಾ ಮಹಾವಿದ್ಯಾಲಯದ ತರಕಾರಿ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಪಿ. ಹಾದಿಮನಿ ಆಗಮಿಸುವರು.ಅಧ್ಯಕ್ಷತೆಯನ್ನು ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ದಾನಪ್ಪಗೌಡ್ರ ವಹಿಸುವರು. ಅತಿಥಿಗಳಾಗಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಕಾರ್ಯದರ್ಶಿ ಚನ್ನವೀರಪ್ಪ ಹುಣಶಿಕಟ್ಟಿ, ಅಕ್ಕನ ಬಳಗದ ಟ್ರಸ್ಟ್‌ ಅಧ್ಯಕ್ಷರಾದ ಕಸ್ತೂರಿ ಹಿರೇಗೌಡ್ರ, ಜಯಶ್ರೀ ಹುಬ್ಬಳ್ಳಿ ಆಗಮಿಸುವರು.ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಕಾರ್ಯದರ್ಶಿ ಪೂರ್ಣಿಮಾ ಆಟದ, ಖಜಾಂಚಿ ರೇಣುಕಾ ಅಮಾತ್ಯ, ಅಕ್ಕನ ಬಳಗದ ಕಾರ್ಯದರ್ಶಿ ಜಯಶ್ರೀ ಪಾಟೀಲ, ಖಜಾಂಚಿ ಶಿವಲೀಲಾ ಹಿರೇಮಠ ಉಪಸ್ಥಿತರಿರುವರು ಎಂದು ಅಕ್ಕನ ಬಳಗದ ಕಾರ್ಯದರ್ಶಿ ಜಯಶ್ರೀ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಅಭಿನವ ಯಚ್ಚರ ಶ್ರೀಗಳ ಮೌನ ಅನುಷ್ಠಾನ ಮಂಗಲೋತ್ಸವ
ಲಕ್ಷ್ಮೇಶ್ವರದಲ್ಲಿ ಮಳೆಗಾಗಿ ಸೋಮೇಶ್ವರನಿಗೆ ಜಲಾಭಿಷೇಕ