ಬೀದರ್‌ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸೋಣ: ನ್ಯಾಯಧೀಶರಾದ ಪ್ರಭು ಬಡಿಗೇರ

KannadaprabhaNewsNetwork |  
Published : Jun 13, 2024, 12:55 AM IST
ಚಿತ್ರ 12ಬಿಡಿಆರ್‌3ಬೀದರ್‌ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್‌ ನ್ಯಾಯಧೀಶರು ಹಾಗೂ ಡಿಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿಗಳಾದ ಪ್ರಭು ಎನ್‌ ಬಡಿಗೇರ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ

ಕನ್ನಡಪ್ರಭ ವಾರ್ತೆ ಬೀದರ್‌

ಭವಿಷ್ಯದಲ್ಲಿ ದೇಶದ ಚುಕ್ಕಾಣಿ ಹಿಡಿಯುವಂತ ಮಕ್ಕಳು ಇಂದು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಪಾಲಕರ ಅನಿವಾರ್ಯಕ್ಕೆ ಒಳಗಾಗಿ ಬಾಲ ಕಾರ್ಮಿಕರಾಗುತ್ತಿದ್ದಾರೆ. ಹೀಗಾಗಿ ನಾವೆಲ್ಲ ಸೇರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೋಡೋಣ ಎಂದು ಪ್ರಧಾನ ಸಿವಿಲ್‌ ನ್ಯಾಯಧೀಶರು ಹಾಗೂ ಡಿಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿಗಳಾದ ಪ್ರಭು ಎನ್‌ ಬಡಿಗೇರ್‌ ಕರೆ ನೀಡಿದರು.

ಅವರು ಬುಧವಾರ ಇಲ್ಲಿನ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡತನದಲ್ಲಿರುವ ಕೆಲವೊಂದು ಪಾಲಕರು 14 ವರ್ಷದೊಳಗಿನ ತಮ್ಮ ಮಕ್ಕಳನ್ನು ವಿವಿಧ ಕಾಮಗಾರಿಗಳಲ್ಲಿ ಕೆಲಸಕ್ಕೆ ದೂಡಿ ಶಿಕ್ಷಣ ವಂಚಿತರನ್ನಾಗಿ ಮಾಡಿ ಸಣ್ಣ ವಯಸ್ಸಿನಲ್ಲಿಯೇ ದುಡಿಮೆಗೆ ಕಳುಹಿಸುತ್ತಿರುವುದು ಖಂಡನೀಯವಾದದ್ದು, ಅಂತಹ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವ ಕಾರ್ಯ ನಾವೆಲ್ಲರು ಸೇರಿ ಮಾಡಬೇಕಾಗಿದೆ. ಬಾಲ ಮತ್ತು ಕಿಶೋರ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ 1986ರ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಹಾಗು 18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಸೇರಿದಂತೆ ವಿವಿಧ ಶಾಲಾ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಬಾಲಕಾರ್ಮಿಕ ಯೋಜನೆ ಶ್ರೀಹರಿ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಂಗಮಂದಿರದವರೆಗೆ ವಿವಿಧ ಶಾಲಾ ಮಕ್ಕಳಿಂದ ಕಾಲ್ನಡಿಗೆ ಜಾಥಾ ನಡೆಯಿತು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವಶರಣಪ್ಪ ಪಾಟೀಲ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಗುರುರಾಜ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಕ್ಕಳ ಕಲ್ಯಾಣ ಸಮಿತಿಯ ಮಂಜುಳಾ, ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಅರ್ಜುನ ಎಸ್‌, ಕಾರ್ಮಿಕ ನಿರೀಕ್ಷಕರಾದ ಕೆ.ಸುವರ್ಣಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಎ.ಕೆ ಜೋಶಿ, ಸಿಡಿಪಿಒ ಶಾರದಾ ಹಾಗೂ ಕಾರ್ಮಿಕ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''