ಒಲಂಪಿಕ್ ಕ್ರೀಡಾಕೂಟ ಯಶಸ್ವಿ ಮಾಡೋಣ

KannadaprabhaNewsNetwork |  
Published : Dec 15, 2025, 02:15 AM IST
ಿ್ಿ್ಿ್ | Kannada Prabha

ಸಾರಾಂಶ

2026 ಜನವರಿ 16 ರಿಂದ 22 ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಒಲಂಪಿಕ್ ಕ್ರೀಡಾಕೂಟದ ಯಶಸ್ವಿಯಾಗಿ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು2026 ಜನವರಿ 16 ರಿಂದ 22 ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಒಲಂಪಿಕ್ ಕ್ರೀಡಾಕೂಟದ ಯಶಸ್ವಿಯಾಗಿ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ಒಲಂಪಿಕ್ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಮತನಾಡಿ ಈಗಾಗಲೇ ತುಮಕೂರು ದಸರಾ ಯಶಸ್ವಿ ಆಚರಣೆ ಆಗಿರುವುದು ರಾಜ್ಯದ ಜನರ ಗಮನ ಸೆಳೆದಿದೆ. ಅದೇ ರೀತಿಯಲ್ಲಿ ತುಮಕೂರಿನಲ್ಲಿ ನಡೆಯುವ ಒಲಂಪಿಕ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು. ಕಳೆದ ವರ್ಷ ಮಂಗಳೂರಿನಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ವರ್ಷ ತುಮಕೂರು ಆತಿಥ್ಯ ವಹಿಸುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತದಿಂದ ನಿಗದಿಗೊಳಿಸಿರುವ ಉಪಸಮಿತಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.ಇದು ವಾರ ಪೂರ್ತಿ ಕಾರ್ಯನಕ್ರಮವಾಗಿರುವುದರಿಂದ ಸಾರ್ವಜನಿಕರಿಗೆ ಕ್ರೀಡೆಗಳನ್ನು ನೋಡಲು ಹಾಗೂ ಪ್ರೋತ್ಸಾಹಿಸಲು ಅನುಕೂಲವಾಗುವಂತೆ ಪ್ರಚಾರ ಕಾರ್ಯ, ಕ್ರೀಡಾಪಟುಗಳಿಗೆ ಸರಿಯಾದ ಊಟ- ವಸತಿ, ಪ್ರಯಾಣಸೌಲಭ್ಯ ಇತ್ಯಾದಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು. ಅಲ್ಲದೆ ಸುಮಾರು 9 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಬರುತ್ತಿರುವುದರಿಂದ ಅವರ ಸುರಕ್ಷತೆ ಕೂಡ ಮುಖ್ಯವಿದ್ದು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಯುವ ಸಬಲೀಕರಣ ಇಲಾಖೆ ಆಯುಕ್ತ ಚೇತನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯೆನಿರ್ವಾಹಕ ಅಧಿಕಾರಿ ಪ್ರಭು ಜಿ. ಜಿಲ್ಲಾ ಪೊಲೀಸ್ ಅಧೀಕ್ಷಕ ಆಶೋಕ್ ಕೆ.ವಿ. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!