ನಾಳಿನ ಪಲ್ಸ್‌ ಪೋಲಿಯೋ ಯಶಸ್ವಿಗೊಳಿಸೋಣ

KannadaprabhaNewsNetwork |  
Published : Jun 27, 2026, 01:30 AM IST
ಡಾ.ಐ.ಪಿ.ಗಡದ | Kannada Prabha

ಸಾರಾಂಶ

5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ರಕ್ಷಣೆ ನೀಡಲು ಜೂ.28 ರಂದು ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡದ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ರಕ್ಷಣೆ ನೀಡಲು ಜೂ.28 ರಂದು ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡದ ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಜೂ.28 ರಂದು ಪೋಲಿಯೋ ಬೂತ್‌ಗಳಲ್ಲಿ ಹಾಗೂ ನಂತರದ 2-3 ದಿನ ಮನೆ ಮನೆ ಭೇಟಿ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಬಾಯಿಯ ಮೂಲಕ 2 ಹನಿ ಪೋಲಿಯೋ ಲಸಿಕೆ ಹಾಕಲಾಗುವುದು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 4,71,041 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಇದಕ್ಕಾಗಿ 2,331 ಬೂತ್, 49 ಸಂಚಾರಿ ತಂಡ, 74 ಟ್ರಾನ್ಸಿಟ್ ತಂಡ ರಚಿಸಲಾಗಿದೆ. 9,514 ಲಸಿಕಾ ಕಾರ್ಯಕರ್ತರು ಹಾಗೂ 618 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ವಿಶೇಷವಾಗಿ ವಲಸಿಗ ಸಮುದಾಯ, ಹೆಚ್ಚು ಅಪಾಯದಂಚಿನ ಪ್ರದೇಶ, ನಗರದ ಸ್ಲಂ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಬಟ್ಟಿ, ಕಾಮಗಾರಿ ಪ್ರದೇಶ, ತೋಟದ ಮನೆ, ರೈಲ್ವೆ ಸ್ಟೇಷನ್, ಏರ್‌ಪೋರ್ಟ್, ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇಲೆ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.ಭಾರತ ಪೋಲಿಯೋ ಮುಕ್ತವಾಗಿ 15ಕ್ಕೂ ಹೆಚ್ಚು ವರ್ಷಗಳಾಗಿವೆ. ಆದರೆ, ಇತ್ತೀಚೆಗೆ ನೆರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣ ಕಂಡು ಬಂದಿದೆ. ನೆರೆಯ ದೇಶಗಳಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಪೋಲಿಯೋ ಮುಕ್ತ ಸ್ಥಿತಿ ಮುಂದುವರಿಸಲು ಮುಂಜಾಗ್ರತೆಯಾಗಿ ಪಲ್ಸ್ ಪೋಲಿಯೋ ಮುಂದುವರಿಸಲಾಗಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಸಮನ್ವಯ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಹಕಾರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 4,71,041 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. 2,331 ಬೂತ್‌ಗಳಲ್ಲಿ 9,514 ಕಾರ್ಯಕರ್ತರನ್ನು ನೇಮಿಸಲಾಗಿದೆ. 49 ಸಂಚಾರಿ ತಂಡ, 618 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಮಕ್ಕಳಿಗೆ ಪಲ್ಸ್ ಹನಿ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸೋಣ. ಪೋಲಿಯೋ ವಿರುದ್ಧ ಹೋರಾಡಲು ಮಕ್ಕಳಿಗೆ ಬಲ ತುಂಬೋಣ.

-ಡಾ.ಐ.ಪಿ.ಗಡದ, ಡಿಎಚ್ಒ ಬೆಳಗಾವಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾತಿ ಸಂಕೋಲೆಯಿಂದ ಸಮಾಜ ಬಿಡುಗಡೆಯಾಗಲಿ
ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ