ಸೈನಿಕರ ಪರಾಕ್ರಮಕ್ಕೆ ಗೌರವ ನೀಡೋಣ

KannadaprabhaNewsNetwork |  
Published : May 27, 2025, 12:07 AM ISTUpdated : May 27, 2025, 12:08 AM IST
ತಿರಂಗಾ ಯಾತ್ರೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಹಗಲಿರುಳು ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರಿಗೆ ನಾವು ಗೌರವ ನೀಡಬೇಕಿದೆ. ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಜತೆ ನಾವಿದ್ದೇವೆ ಎಂಬ ಆತ್ಮಸ್ಥೆರ್ಯವನ್ನು ತುಂಬಲು ಜಿಲ್ಲೆಯಲ್ಲಿ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಹಗಲಿರುಳು ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರಿಗೆ ನಾವು ಗೌರವ ನೀಡಬೇಕಿದೆ. ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಜತೆ ನಾವಿದ್ದೇವೆ ಎಂಬ ಆತ್ಮಸ್ಥೆರ್ಯವನ್ನು ತುಂಬಲು ಜಿಲ್ಲೆಯಲ್ಲಿ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಹೇಳಿದರು. ಪಟ್ಟಣದಲ್ಲಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ಮೊಹರೆ ವೃತ್ತದಲ್ಲಿ ಅವರು ಚಾಲನೆ ನೀಡಿದರು. ಮೊಹರೆ ವೃತ್ತದಿಂದ ಪ್ರಾರಂಭವಾದ ತಿರಂಗಾ ಯಾತ್ರೆ ಬಸ್ ನಿಲ್ದಾಣದ ಮಾರ್ಗವಾಗಿ ನಡೆದು ಡಾ.ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯವಾಯಿತು. ಈ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಜನರನ್ನು ಅಮಾನುಷವಾಗಿ ಕೊಂದು ಹಾಕಿ ಕ್ರೂರತೆ ಪ್ರದರ್ಶಿಸಿದ ಪಾಕಿಸ್ತಾನಿ ಉಗ್ರಗಾಮಿಗಳಿಗೆ ಭಾರತೀಯ ಸೇನೆ ಈ ಆಪರೇಷನ್‌ ಸಿಂದೂರ ಮೂಲಕ ತಕ್ಕ ಉತ್ತರವನ್ನು ನೀಡಿದೆ. ಪಕ್ಷಾತೀತ ಮತ್ತು ಧರ್ಮಾತೀತವಾಗಿ ಭಾರತೀಯ ಯೋಧರಿಗೆ ತಿರಂಗ ಯಾತ್ರೆಯ ಮೂಲಕ ಧೈರ್ಯ ತುಂಬುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದರು.ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ಪೆಹಲ್ಗಾಮ್‌ನಲ್ಲಿ ಕುಂಕುಮ ಕಳೆದುಕೊಂಡಿರುವ ಸಹೋದರಿಯರಿಗೆ ಧೈರ್ಯ ತುಂಬುವ ಕೆಲಸ ಮಾಡಲು ತಿರಂಗ ಯಾತ್ರೆ ನಡೆಸಲಾಗುತ್ತಿದೆ. ನಮ್ಮ ದೇಶದ ಸೈನಿಕರ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸುವ ಆಪರೇಷನ್ ಸಿಂದೂರ ಇನ್ನು ಮುಗಿದಿಲ್ಲ ಎಂದರು.ಪಟ್ಟಣದ ಜಡಿಮಠದ ಜಡಿ ಸಿದ್ದೇಶ್ವರ ಶಿವಾಚಾರ್ಯರು ಹಾಗೂ ಇಟಗಿ-ಸಾತಿಹಾಳ ಶ್ರೀಗಳು ಮಾತನಾಡಿ, ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಭಾರತೀಯ ಸೈನ್ಯದ ಪರಾಕ್ರಮ ಆಪರೇಷನ್ ಸಿಂದೂರದ ಯಶಸ್ಸಿಗೆ ಸೈನಿಕರಿಗೆ ಕೃತಜ್ಞತೆ ತಿಳಿಸಬೇಕಿದೆ. ಅದಕ್ಕಾಗಿ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ತಿರಂಗ ಯಾತ್ರೆ ಮಳೆಯಲ್ಲೂ ಯಶಸ್ವಿಯಾಗಿದೆ ಎಂದು ತಿಳಿಸಿದರು.ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಸಂಘದ ಅಧ್ಯಕ್ಷ ರಾಮಪ್ಪ.ಎಲ್.ಕೆ ಮಾತನಾಡಿದರು. ತಿರಂಗ ಯಾತ್ರೆಯ ನಂತರ ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಅವ್ವನಗೌಡ ಗ್ವಾತಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ ಅಸ್ಕಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ, ಮಾಜಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಾಂತೇಶ ಬಿರಾದಾರ, ಪ್ರಕಾಶ ದೊಡಮನಿ, ಮುಖಂಡರಾದ ಸೋಮಶೇಖರ ಹಿರೇಮಠ, ಗುರುನಾಥ ಮುರಡಿ, ಸೋಮು ದೇವೂರ, ಶರಣು ದಳವಾಯಿ, ರಮೇಶ ಇಳಗೇರ, ಪಿಂಟು ಬಾಸುತ್ಕಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮುಖಂಡರು ಹಾಗೂ ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ