ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಶುಕ್ರವಾರ ಸಿಂದಗಿ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಲಯ, ಗ್ರಾಮ ಪಂಚಾಯತಿ ಹಾಗೂ ಬಸವ ಹಸಿರು ಸೇನೆ ಬಳಗ ಇವರ ಸಹಯೋಗದಲ್ಲಿ ಪ್ರಕೃತಿಯಿಂದ ಪ್ರೇರಿತ, ಹವಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ಎಂಬ ಘೋಷಣೆಯೊಂದಿಗೆ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಟ್ಟು ನೀರೆರೆದು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು, ದೈಹಿಕ ಶ್ರಮ ಕಡಿಮೆಯಾಗಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆರೋಗ್ಯ ಸದೃಢವಾಗಿರಬೇಕಾದರೆ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕಿದೆ. ಗ್ರಾಮದ ಬಸವ ಹಸಿರು ಸೇನೆ ಬಳಗದಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚು ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿದವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಪ್ರತಿಯೊಬ್ಬರೂ ಗಿಡ ನೆಟ್ಟು ನೀರುಣಿಸಿ ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುವುದೇ ಪರಿಸರಕ್ಕೆ ನೀಡುವ ಬಹುದೊಡ್ಡ ಕೊಡುಗೆಯಾಗಿದೆ ಎಂದರು.
ಅರಣ್ಯ ಇಲಾಖೆಯ ಜಿ.ಬಿ.ರಾಮಗಿರಿಮಠ ಅವರು ಮಾತನಾಡಿ, ಪ್ರಾಣಿ ಸಂಕುಲಕ್ಕೆ ಪರಿಸರವೇ ಜೀವನಾಧಾರ. ಹಾಗಾಗಿ ಪರಿಸರ ಉಳಿಸಿ ಬೆಳೆಸುವುದರ ಮೂಲಕ ಮುಂದಿನ ಪೀಳಿಗೆಗೆ ರಕ್ಷಿಸಬೇಕು. ಇದು ನಮ್ಮೆಲ್ಲದ ಆದ್ಯ ಕರ್ತವ್ಯವೂ ಹೌದು. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಈ ಭಾಗದಲ್ಲಿ ಇಲಾಖೆಯ ಅಧಿಕಾರಿಗಳಾದ ರಾಜು ಬಿರಾದಾರ ಅವರ ಮಾರ್ಗದರ್ಶನದಲ್ಲಿ ಸಾವಿರಾರು ಗಿಡಗಳನ್ನು ಇಲಾಖೆ ವತಿಯಿಂದ ನೆಟ್ಟಿದ್ದೇವೆ ಹಾಗೂ ಬಸವ ಹಸಿರು ಸೇನೆಯ ಬಳಗದ ಸಹಯೋಗದಲ್ಲಿ ಸುಮಾರು 1100 ಗಿಡಗಳನ್ನು ನೆಡಲು ಸಿದ್ಧರಾಗಿದ್ದೇವೆ. ಗ್ರಾಮಸ್ಥರ ಸಹಕಾರದಿಂದ ಪರಿಸರ ರಕ್ಷಣೆಗೆ ಪ್ರತಿಯೊಬ್ಬರ ಮನೆ, ದೇವಸ್ಥಾನ, ಶಾಲಾ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡವುರೊಂದಿಗೆ ಪರಿಸರ ಉಳಿಸಿ ಬೆಳೆಸಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ವಸಂತ ನಾಯಕ, ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಬಿರಾದಾರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಬಸವ ಸೇನೆಯ ಬಳಗದವರು ಇದ್ದರು.