ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ರುಡ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಒಂದು ದಿನದ ಸಾಮರ್ಥ್ಯ ಬಲವರ್ಧನೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತೆಡೆಗಟ್ಟಬೇಕು ಹಾಗೂ ಸಮಾಜಕ್ಕೆ ಅತಿದೊಡ್ಡ ಪಿಡುಗಾದ ಬಾಲ್ಯ ವಿವಾಹ ಪದ್ಧತಿ ತಡೆದು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಮಾಡುವಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಹೆಣ್ಣು ಮಕ್ಕಳು ಯಾವುದರಲ್ಲಿಯು ಕಡಿಮೆ ಇಲ್ಲ, ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಎಲ್ಲರೂ ಶಿಕ್ಷಣ ಪಡೆದು ಸ್ವಾವಲಂಬನೆ ಹೊಂದಬೇಕು ಎಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ತಾಯಂದಿರು ಲಿಂಗ ತಾರತಮ್ಯ ಮಾಡದೇ, ಶಿಕ್ಷಣ ಮತ್ತು ಸಾಮಾಜಿಕ ಜೀವನದಲ್ಲಿ ಗಂಡು ಮಗುವಿಗೆ ನೀಡುವ ಪ್ರಾಮುಖ್ಯತೆಯನ್ನು ಹೆಣ್ಣಿಗೂ ನೀಡಿದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಶಾಲಾ, ಕಾಲೇಜಿಗೆ ಹೋಗುವ ಹೆಣ್ಣು ಮಗುವಿನ ಮೇಲೆ ನಿಗಾ ಇಟ್ಟರೆ ಆಗುವ ದುರಂತಗಳಿಂದ ರಕ್ಷಿಸಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಮಾತನಾಡಿ, ಸಮಾಜದಲ್ಲಿ ಇರುವ ಅನಿಷ್ಟ ಪದ್ಧತಿ ತೊಡೆದು ಹಾಕುವಂತೆ ಗ್ರಾಮ ಮಟ್ಟದಿಂದಲೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸುವುದು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು, ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣದ ವ್ಯಾಮೋಹಕ್ಕೆ ಒಳಗಾಗಿ ತಮ್ಮ ವಿದ್ಯಾರ್ಥಿ ಜೀವನ ವ್ಯರ್ಥ ಮಾಡಕೊಳ್ಳದೆ ಇರುವಂತೆ ನೋಡಿಕೊಳ್ಳುವುದು ನಮ್ಮೆಲರ ಹೊಣೆಯಾಗಿದೆ ಎಂದು ತಿಳಿಸಿದರು.ಇನ್ನೊರ್ವ ಮುಖ್ಯಅತಿಥಿ ಯುವ ಜನ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ರಾಜಶೇಖರ ದೈವಾಡಿ, ಹೆಣ್ಣು ಮಕ್ಕಳ ಮಹತ್ವ ಕುರಿತು ಹೇಳಿದರು.
ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಆರ್.ಎ.ದಿನ್ನಿ ಮಾತನಾಡಿ, ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳು ಒಡ್ಡೂವ ಆಸೆ, ಆಮಿಷಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ಮಕ್ಕಳು ಹಾನಿ ಮಾಡಿಕೊಳ್ಳದಂತೆ ನೋಡಿಕೊಳ್ಳುವುದು ಪಾಲಕರ ಜವಾಬ್ದಾರಿಯಾಗಿದೆ. ಯಾವುದೇ ರೀತಿ ಸಂಕಷ್ಟಕ್ಕೆ ಮಹಿಳೆಯರು ಒಳಗಾದಾಗ ಮುಜುಗರ ಹಾಗೂ ಸಂಕೋಚ ಪಡದೇ ನೇರವಾಗಿ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ಅಥವಾ ಕರೆ ಮಾಡಬಹುದು ಎಂದು ಹೇಳಿದರು.ಮೇಲ್ವಿಚಾರಕರಾದ ಶಿಲ್ಪಾ ನಾಯಿಕ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮ ಸಂಯೋಜಕ ಸಿ.ಕೆ ಸುರೇಶ, ಡಾ.ಶೋಭಾ ಗುಡದಿನ್ನಿ, ಡಾ.ಪರಶುರಾಮ ಹಿಟ್ನಳ್ಳಿ, ಟಿ.ಎಸ್.ಕೊಲ್ಹಾರ ಇತರರು ಇದ್ದರು.