2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಸಂಕಲ್ಪ ತೊಡೋಣ-ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Aug 15, 2026, 03:15 AM IST
14ಎಚ್‌ವಿಆರ್‌1 | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಲ್ಪನೆಯ ''ವಿಕಸಿತ ಭಾರತ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬ ನಾಗರಿಕನೂ ಸಮರ್ಪಣಾ ಭಾವದಿಂದ ಶ್ರಮಿಸಬೇಕು. ಈ ಸುದೀರ್ಘ ಪ್ರಗತಿಯ ಪಯಣಕ್ಕೆ ಎಲ್ಲರೂ ಸಿದ್ಧರಾಗಿ ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಲ್ಪನೆಯ ''''''''ವಿಕಸಿತ ಭಾರತ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬ ನಾಗರಿಕನೂ ಸಮರ್ಪಣಾ ಭಾವದಿಂದ ಶ್ರಮಿಸಬೇಕು. ಈ ಸುದೀರ್ಘ ಪ್ರಗತಿಯ ಪಯಣಕ್ಕೆ ಎಲ್ಲರೂ ಸಿದ್ಧರಾಗಿ ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಇಲ್ಲಿಯ ಸಂಸದರ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 78-80 ವರ್ಷಗಳ ಸುದೀರ್ಘ ಅವಧಿಯಲ್ಲಿ ದೇಶವು ಸಾಗಿ ಬಂದಿರುವ ದಾರಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಮುಂದಿನ ಭವಿಷ್ಯವನ್ನು ಶಕ್ತಿಯುತವಾಗಿ ನಿರ್ಮಾಣ ಮಾಡಲು ಇದು ಸೂಕ್ತ ಸಮಯ " ಎಂದು ಬೊಮ್ಮಾಯಿ ತಿಳಿಸಿದರು.

​ಸಂಪುಟಕ್ಕೆ ನಾಗೇಂದ್ರ: ಉದ್ಧಟತನ

​ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹89 ಕೋಟಿ ಅವ್ಯವಹಾರವಾಗಿದೆ ಎಂದು ಖುದ್ದು ಹಿಂದಿನ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಮಗ್ರ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹಣ ಎಲ್ಲಿಂದ ಬಂತು ಮತ್ತು ಎಲ್ಲಿಗೆ ಹೋಯಿತು ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಇಷ್ಟಾದರೂ, ಚಾರ್ಜ್ ಶೀಟ್ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನ ಮತ್ತು ನೈತಿಕತೆಯ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಉದ್ಧಟತನದ ಪರಮಾವಧಿಯಾಗಿದ್ದು, ಬಿಜೆಪಿ ಇದನ್ನು ತೀವ್ರವಾಗಿ ವಿರೋಧಿಸುತ್ತದೆ " ಎಂದು ಕಿಡಿಕಾರಿದರು.

​ಸಚಿವ ಜಮೀರ್ ಅಹ್ಮದ್ ಕಡೆಗಣನೆ: "ದಾವಣಗೆರೆ ಚುನಾವಣೆಯ ಬಳಿಕ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ತಮ್ಮ ಸ್ಥಾನಮಾನ ಹಾಗೂ ಗೌರವವನ್ನು ಕಳೆದುಕೊಂಡಿದ್ದಾರೆ. ಅವರನ್ನು ಪ್ರತಿಯೊಂದು ಹಂತದಲ್ಲೂ ಕಡೆಗಣಿಸಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಬೇಡ ಎಂದಿರುವ ಅವರ ಮುಂದಿನ ನಡೆಗಳನ್ನು ನಾವು ಕಾದುನೋಡಬೇಕಿದೆ " ಎಂದರು.

ಖರ್ಗೆ ಭಾಷಣದ ಸ್ಥಳದ ಶುದ್ಧೀಕರಣ ಖಂಡನೀಯ: ಉತ್ತರಾಖಂಡನ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿ ಹೋದ ಬಳಿಕ, ಕೆಲವು ಕಿಡಿಗೇಡಿಗಳು ಆ ಸ್ಥಳವನ್ನು ''''''''ಶುದ್ಧೀಕರಣ'''''''' ಮಾಡಿದ ಘಟನೆಯನ್ನು ಬೊಮ್ಮಾಯಿ ತೀವ್ರವಾಗಿ ಖಂಡಿಸಿದರು. "ಹಿರಿಯ ನಾಯಕರೊಬ್ಬರು ಭಾಷಣ ಮಾಡಿ ಹೋದ ಬಳಿಕ ಆ ಜಾಗವನ್ನು ಶುದ್ಧೀಕರಣ ಮಾಡುವುದು ಅಕ್ಷಮ್ಯ ಅಪರಾಧ. ಇದನ್ನು ನಾವು ಎಂದಿಗೂ ಒಪ್ಪುವುದಿಲ್ಲ. ಇದು ಅವರಿಗೆ ಮಾಡಿದ ಅವಮಾನವಾಗಿದ್ದು, ಇಂತಹ ಕೃತ್ಯಗಳನ್ನು ನಾವು ಬೆಂಬಲಿಸುವುದಿಲ್ಲ " ಎಂದು ಸ್ಪಷ್ಟಪಡಿಸಿದರು.

​​ಮೇಕೆದಾಟು ಯೋಜನೆ ಪರಿಹಾರ: ​ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು "ಮೇಕೆದಾಟು ಯೋಜನೆ ಒಂದೇ ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ " ಎಂದು ಸ್ಪಷ್ಟಪಡಿಸಿದರು. ​ಅತಿ ಹೆಚ್ಚು ಮಳೆಯಾದ ವರ್ಷಗಳಲ್ಲಿ ಹೆಚ್ಚುವರಿ ನೀರನ್ನು ಸುಮಾರು 66-67 ಟಿಎಂಸಿ ಶೇಖರಣೆ ಮಾಡಿಟ್ಟುಕೊಂಡರೆ ಮಾತ್ರ, ಮಳೆ ಅಭಾವವಿರುವ ವರ್ಷಗಳಲ್ಲಿ ಉಂಟಾಗುವ ಸಂಘರ್ಷವನ್ನು ತಡೆಯಲು ಸಾಧ್ಯ. ಮೇಕೆದಾಟು ನಿರ್ಮಾಣವಾಗದಿದ್ದರೆ ಪ್ರತಿ ಮಳೆ ಕೊರತೆ ವರ್ಷದಲ್ಲೂ ಈ ಸಮಸ್ಯೆ ಮರುಕಳಿಸುತ್ತಲೇ ಇರುತ್ತದೆ ಎಂದರು.

​ಅಡಕೆ ಬೆಳೆಗಾರರ ಹಿತರಕ್ಷಣೆ: ​ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ ಹಾಗೂ ಅಡಕೆ ಬೆಳೆಗಾರರ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದ ಅವರು, "ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ಅಡಕೆ ಬೆಳೆಗಾರರ ಹಿತರಕ್ಷಣೆಯನ್ನೂ ಮಾಡಬೇಕಾಗಿದೆ. ಅಡಕೆ ಬೆಳೆ ಮೊದಲು ಮಲೆನಾಡಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಬಯಲುಸೀಮೆ ಪ್ರದೇಶಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಅಡಕೆ ಬೆಳೆಯಿಂದ ಇಳುವರಿ ಪಡೆಯಲು ಕನಿಷ್ಠ 5 ವರ್ಷ ಕಾಯಬೇಕು. ರೈತರು ತಮ್ಮ ಸಂಪೂರ್ಣ ಸಂಪನ್ಮೂಲ ಹಾಗೂ ಹಣವನ್ನು ಇದರಲ್ಲಿ ಹೂಡಿಕೆ ಮಾಡಿರುತ್ತಾರೆ. ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಅಡಕೆ ಸಾಗಾಟ ಹಾಗೂ ಮಾರಾಟಕ್ಕೆ ತೊಂದರೆ ಎದುರಾಗಿದ್ದು, ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ, ರೈತರ ಹಿತ ಕಾಯುವ ಸ್ಪಷ್ಟ ನೀತಿಯನ್ನು ರೂಪಿಸಬೇಕು. ಒಂದು ವೇಳೆ ಸರ್ಕಾರದ ನಿರ್ಧಾರದಿಂದ ರೈತರಿಗೆ ನಷ್ಟವಾದರೆ, ಆ ನಷ್ಟ ಪರಿಹಾರವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರಧ್ವಜ ಕೇವಲ ಮೂರು ಬಣ್ಣಗಳ ಸಂಕೇತವಲ್ಲ. ಏಕತೆಯ ಪ್ರತೀಕ-ಸೌಮ್ಯ
ಸಂಭ್ರಮದ ಭಾರತ ಮಾತಾ ಮೆರವಣಿಗೆ