ಕನ್ನಡಪ್ರಭ ವಾರ್ತೆ ಹೊಸನಗರ
ಇಲ್ಲಿನ ಪೊಲೀಸ್ ಠಾಣೆ ಮುಂಭಾಗ ಶನಿವಾರ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುವುದರ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೆ ಶಾಸಕರ ಕುಮ್ಮಕ್ಕಿನಿಂದ ಸುಳ್ಳು ಕೇಸ್ ಹಾಕುತ್ತಿರುವುದರ ವಿರುದ್ಧ ಬಿಜೆಪಿ ಪಕ್ಷದ ವತಿಯಿಂದ ಮಾಜಿ ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಧರಣಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾರ ಅಧಿಕಾರವು ಶಾಶ್ವತವಲ್ಲ. ಕಾಲ ಬದಲಾದಂತೆ ಕುರ್ಚಿಯು ಬದಲಾವಣೆಯಾಗುತ್ತದೆ. ಇದ್ದಾಗ ಒಳ್ಳೆಯ ಕೆಲಸ ಮಾಡಿದರೆ ಜನರಬಮನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಅದು ಬಿಟ್ಟು ಬೇರೆಯವರು ಮಾಡಿಸಿದ, ಮಾಡಿಸುತ್ತಿರುವ ಕೆಲಸ ನಾನೆ ಮಾಡಿದ್ದು ಎಂದು ಹೇಳುವುದು ಎಷ್ಟು ಸರಿ. ಅದು ಅಲ್ಲದೇ ಉಪಕಾರ ಮಾಡುವ ಮನಸ್ಸಿದ್ದರೆ ಪಕ್ಷ ಪಾರ್ಟಿ ಬರುವುದಿಲ್ಲ ಎಲ್ಲರಿಗೂ ಉಪಕಾರ ಮಾಡಬೇಕು. ಅದು ಬಿಟ್ಟು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಕೇಸ್ ಹಾಕುವುದು. ಬೇರೆ ಬೇರೆ ಪ್ರಕರಣದಲ್ಲಿ ಸಿಕ್ಕಿಸಿ ತೊಂದರೆ ನೀಡಿದರೆ ಬಿಜೆಪಿ ಕಾರ್ಯಕರ್ತರು ಬಲಿಷ್ಠರಾಗಿದ್ದಾರೆ ಎಂದರು.ಧರಣಿ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ ಸಂದರ್ಭದಲ್ಲಿ ಮಾಧವಶೆಟ್ಟಿಗೆ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದಾರೆ. ಕೊಲೆ ಮಾಡಲು ಸಂಚು ನಡೆಸಿದ್ದಾರೆ ಎಂದು ಮೂರು ಜನ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಅಟ್ಟಿದ್ದು, ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದರು.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಟಿ.ಡಿ ಮೇಘರಾಜ್, ಶಿವರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ರಾಜ್ಯ ಕಾಂಗ್ರೆಸ್‌ನ ಆಡಳಿತದ ವಿರುದ್ಧ ಮಾತನಾಡಿದರು.ಬಿಜೆಪಿ ಮಂಡಲದ ಅಧ್ಯಕ್ಷ ಎನ್.ಸತೀಶ್, ಆರ್.ಟಿ ಗೋಪಾಲ್, ಬಿಜೆಪಿ ತಾಲ್ಲೂಕು ಪ್ರಭಾರಿ ಪದ್ಮಿನಿ, ಎನ್.ಆರ್ ದೇವಾನಂದ್, ಗಣಪತಿ ಬಿಳಗೋಡು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವರ್ತೆಶ್, ಕೆ.ವಿ. ಕೃಷ್ಣಮೂರ್ತಿ, ಆಲವಳ್ಳಿ ವೀರೇಶ್, ಉಮೆಶ್ ಕಂಚುಗಾರ್, ಶ್ರೀಪತಿರಾವ್, ಎಂ.ಎನ್ ಸುಧಾಕರ್, ಯುವರಾಜ್, ಹಾಲಗದ್ದೆ ಉಮೇಶ್, ಅಭಿಲಾಷ್, ಮಂಜುನಾಥ ಸಂಜೀವ, ಸತ್ಯನಾರಾಯಣ, ಮಂಡಾನಿ ಮೋಹನ್, ನಾಗಾರ್ಜುನ ಇತರರು ಹಾಜರಿದ್ದರು.