ಹುಬ್ಬಳ್ಳಿ:
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರು ಕಾನೂನು ಬದ್ಧವಾಗಿ ಪ್ರಾಸಿಕ್ಯೂಷನ್‌ಗೆ ಆದೇಶ ನೀಡಿದ್ದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಇಡೀ ಸರ್ಕಾರವೇ ರಾಜ್ಯಪಾಲರ ವಿರುದ್ಧ ಟೀಕೆ ಮಾಡಿತ್ತು. ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ್ದರು. ಈಗ ರಾಜ್ಯಪಾಲರ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ ಎಂದರು.
ಮುಖ್ಯಮಂತ್ರಿಗಳು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ತನಿಖೆಯಲ್ಲಿ ನಿರಪರಾಧಿ ಎಂದು ತೀರ್ಪು ಬಂದಲ್ಲಿ ಮರಳಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿ. ಒಂದು ವೇಳೆ ರಾಜೀನಾಮೆ ನೀಡದೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ರಾಜ್ಯದ ಜನತೆ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದರು.ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಅಲ್ಲಿನ ಹೈಕಮಾಂಡ್ ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಒಬ್ಬ ಆರೋಪಿ ಮುಖ್ಯಮಂತ್ರಿಯನ್ನು ಅಧಿಕಾರ ನಡೆಸಲು ಅವಕಾಶ ಮಾಡಿರುವುದನ್ನು ಪ್ರಶ್ನಿಸಿ ಬಿಜೆಪಿಯಿಂದ ರಾಷ್ಟ್ರಾದ್ಯಂತ ಹೋರಾಟ ನಡೆಸಲಾಗುವುದು ಎಂದರು.