ಸಮಾಜ ಸೇವೆ ಪ್ರತಿಯೊಬ್ಬರ ಜವಾಬ್ದಾರಿಯಾಗಲಿ

KannadaprabhaNewsNetwork |  
Published : Oct 06, 2026, 01:15 AM IST
ಕೆ ಕೆ ಪಿ ಸುದ್ದಿ 01: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಪುಣ್ಯಭೂಮಿ ಸೇವಾ ಸಮಿತಿ ವತಿಯಿಂದ ಬೆಡ್ ಷಿಟ್ ಗಳನ್ನು ಉಚಿತವಾಗಿ ನೀಡಲಾಯಿತು.  | Kannada Prabha

ಸಾರಾಂಶ

ಕನಕಪುರ: ಸಮಾಜಮುಖಿ ಸೇವಾ ಕಾರ್ಯಗಳಿಂದ ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ, ಯುವಕರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಮ್ಮ ಪುಣ್ಯಭೂಮಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂತೋಷ್ ಕರೆ ನೀಡಿದರು

ಕನಕಪುರ: ಸಮಾಜಮುಖಿ ಸೇವಾ ಕಾರ್ಯಗಳಿಂದ ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ, ಯುವಕರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಮ್ಮ ಪುಣ್ಯಭೂಮಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂತೋಷ್ ಕರೆ ನೀಡಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಮಿತಿ ವತಿಯಿಂದ ಹಣ್ಣು ಹಾಗೂ ಬೆಡ್‌ ಶೀಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ, ಪರಿಸರ ಸಂರಕ್ಷಣೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗುವಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳುವುದು ಸಂಘಟನೆಯ ಉದ್ದೇಶ. ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಸುತ್ತಲಿನ ಪರಿಸರ ಸಂರಕ್ಷಿಸುವ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಗಳಿಕೆಯ ಒಂದು ಭಾಗವನ್ನು ಸಮಾಜಮುಖಿ ಚಟುವಟಿಕೆಗಳಿಗಾಗಿ ವಿನಿಯೋಗಿಸುವಂತೆ ತಿಳಿಸಿದರು.

ನಗರಸಭೆ ಆಯುಕ್ತೆ ಪಂಪಶ್ರೀ ಮಾತನಾಡಿ, ನಮ್ಮ ಪುಣ್ಯ ಭೂಮಿ ಸೇವಾ ಸಮಿತಿಯ ಸಮಾಜಮುಖಿ ಚಟುವಟಿಕೆಗಳು ಶ್ಲಾಘನೀಯ. ಸಂಘಟನೆಯ ಉದ್ದೇಶದಂತೆ ಪ್ರತಿಯೊಬ್ಬರೂ ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛ ಹಾಗೂ ಸುಂದರವಾಗಿಟ್ಟುಕೊಳ್ಳುವ ಸಂಕಲ್ಪ ಮಾಡಬೇಕು ಎಂದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರತಿಮಾದೇವಿ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು, ಬೆಡ್‌ಶೀಟ್‌ ವಿತರಿಸುತ್ತಿರುವ ಸೇವಾ ಸಮಿತಿಗೆ ಕೃತಜ್ಞತೆ ಸಲ್ಲಿಸಿದ ಅವರು, ಸಮಾಜ ಸೇವಾ ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಸರ್ಕಾರಿ ಆಸ್ಪತ್ರೆಗೆ ಅಗತ್ಯ ವಸ್ತುಗಳನ್ನು ಒದಗಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಆಸ್ಪತ್ರೆಯ ಸ್ವಚ್ಛತೆ ಕಾಪಾಡುವುದು ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರೊಂದಿಗೆ ಬರುವ ಸಂಬಂಧಿಕರ ಜವಾಬ್ದಾರಿ. ಆಹಾರ ಸೇವಿಸಿದ ನಂತರ ಉಳಿದ ತ್ಯಾಜ್ಯ ಹಾಗೂ ಔಷಧಿ ಸಂಬಂಧಿತ ತ್ಯಾಜ್ಯ ವಸ್ತುಗಳನ್ನು ನಿಗದಿಪಡಿಸಿರುವ ಸ್ಥಳದಲ್ಲಿಯೇ ಹಾಕಬೇಕು. ಆಸ್ಪತ್ರೆಯ ಪರಿಸರವನ್ನು ಸ್ವಚ್ಛ ಹಾಗೂ ಆರೋಗ್ಯಕರವಾಗಿಡಲು ರೋಗಿಗಳು, ಸಂಬಂಧಿಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಈ ವೇಳೆ ಸಮಿತಿಯ ತಾಲೂಕು ಅಧ್ಯಕ್ಷ ಟಿ.ಸಿ.ವೆಂಕಟೇಶ, ರಾಜ್ಯ ಉಪಾಧ್ಯಕ್ಷ ಎಸ್.ಎಸ್.ಮಂಜುನಾಥ್, ಪ್ರದಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಬಿ.ಕೆ.ವೇಣು, ಉಪಾಧ್ಯಕ್ಷ ಎಂ ಸುರೇಶ್, ಬೆಂಗಳೂರು ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ವಿಶ್ವಾಸ್, ಸಿದ್ದರಾಜು, ಸರ್ಕಾರಿ ಆಸ್ಪತ್ರೆ ನೌಕರರ ಸಂಘದ ಅಧ್ಯಕ್ಷ ಕೆಂಪೇಗೌಡ, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 01:

ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ರೋಗಿಗಳಿಗೆ ಪುಣ್ಯಭೂಮಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂತೋಷ್‌ ಹಣ್ಣು ಹಾಗೂ ಹೊದಿಕೆಗಳನ್ನು ವಿತರಿಸಿದರು. ಡಾ. ಪ್ರತಿಮಾದೇವಿ, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

-ವಿದ್ಯುತ್ ಸಮಸ್ಯೆಗಳ ಕುರಿತು ಜೆಸ್ಕಾಂ ಎಂಡಿ ಜೊತೆ ಶಾಸಕರ ಚರ್ಚೆ
ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ: ವಿನೋದಕುಮಾರ