- ಚನ್ನಗಿರಿ ಪ್ರೌಢಶಾಲಾ ಶಿಕ್ಷಕರ ಕಾರ್ಯಾಗಾರ
ಚನ್ನಗಿರಿ: ತಾಲೂಕಿನಲ್ಲಿರುವ ಪ್ರೌಢಶಾಲೆಗಳಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳಲ್ಲಿನ ವಿಷಯಗಳನ್ನು ಆರ್ಥವಾಗುವಂತೆ ಬೋಧಿಸುತ್ತ ಉತ್ತಮ ಫಲಿತಾಂಶಗಳು ಬರುವಲ್ಲಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹೆಚ್ಚಿನ ಶ್ರಮ ಹಾಕಬೇಕು. ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಮುಂದಾಗಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಸಹ ನಿರ್ದೇಶಕ ಪ್ರಸನ್ನ ಕುಮಾರ್ ಹೇಳಿದರು.
ಶನಿವಾರ ಪಟ್ಟಣದ ನವಚೇತನ ಶಾಲೆಯ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಮತ್ತು ಸಹ ಶಿಕ್ಷಕರ ಸಮನ್ವಯ ಸಾಧಿಸುವ ಪ್ರೇರಣಾತ್ಮಕ ಒಂದು ದಿನದ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಶಾಲೆಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗಳನ್ನು ಶಿಕ್ಷಕರು ಆರ್ಥ ಮಾಡಿಕೊಂಡು ಅವರಿಗೆ ಅರ್ಥವಾಗುವ ರೀತಿಯಲ್ಲಿ ಬೋಧನೆಗಳನ್ನು ಮಾಡಬೇಕು. ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಗೆ ತಯಾರಿ ಮಾಡುತ್ತ ಹೆಚ್ಚು ಹೆಚ್ಚು ಫಲಿತಾಂಶಗಳು ಬರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಡಾ. ಎಸ್.ಶಂಕರಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಉಮೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸ್ವಾಮಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜಯಪ್ರಕಾಶ್, ರಾಮಚಂದ್ರಪ್ಪ, ನೌಕರರ ಸಂಘದ ಸದಸ್ಯರಾದ ರಮೇಶ್, ಸುಧೀರ್, ಮೌನೇಶಾಚಾರ್, ನವಚೇತನ ಶಾಲೆಯ ಸಿಸ್ಟರ್ ಒಬಿಲಿಯಾ, ಕುಬೇರಪ್ಪ, ಬಸವರಾಜ್ ಉಪಸ್ಥಿತರಿದ್ದರು.
-25ಕೆಸಿಎನ್‌ಜಿ2.ಜೆಪಿಜಿ: