ವ್ಯಸನ ಮುಕ್ತ ದಿನಾಚರಣೆ ಪರಿಣಾಮಕಾರಿಯಾಗಿರಲಿ: ಅಪರ ಜಿಲ್ಲಾಧಿಕಾರಿ ಚಂದ್ರಯ್ಯ

KannadaprabhaNewsNetwork |  
Published : Aug 01, 2024, 12:17 AM IST
ಪೊಟೋ೨೯ಸಿಪಿಟ೧೦: ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಅಪರ ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗುವ ವ್ಯಸನ ಮುಕ್ತ ದಿನಾಚರಣೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅಧಿಕಾರಿಗಳಿಗೆ ಸೂಚಿಸಿದರು. ರಾಮನಗರದಲ್ಲಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

-ಪೂರ್ವಭಾವಿ ಸಿದ್ಧತಾ ಸಭೆ -ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳುವ ಕಾರ್ಯಕ್ರಮಕನ್ನಡಪ್ರಭ ವಾರ್ತೆ ರಾಮನಗರ

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗುವ ವ್ಯಸನ ಮುಕ್ತ ದಿನಾಚರಣೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಅಪರ ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ ಅವರಲ್ಲಿ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈಗಾಗಲೇ ಶಾಲಾ ಕಾಲೇಜು ವ್ಯಾಪ್ತಿಯ ೧೦೦ ಮೀಟರ್ ಅಂತರದಲ್ಲಿ ತಂಬಾಕು ಪದಾರ್ಥಗಳ ಮಾರಾಟ ನಿಷೇಧವಿದೆ. ಅದಾಗ್ಯೂ ಅವುಗಳ ಉಲ್ಲಂಘನೆ ಕಂಡುಬಂದರೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಆ.೧ ರಂದು ಶಾಲೆ-ಕಾಲೇಜುಗಳಲ್ಲಿ ಜರುಗುವ ಪ್ರಾರ್ಥನೆ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಶಾಲಾ ಹಾಗೂ ಕಾಲೇಜುಗಳಿಗೆ ಶಿಕ್ಷಣ ಇಲಾಖೆಯವರು ನಿರ್ದೇಶನ ನೀಡುವಂತೆ ಸೂಚಿಸಿದ ಅವರು, ಹೆಚ್ಚು ವ್ಯಸನಿಗಳಿರುವ ಜಿಲ್ಲೆಯ ಗ್ರಾಮಗಳನ್ನು ಗುರುತಿಸಿ, ಅಲ್ಲಿಯೂ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ್‌ನಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಬೀಡಿ-ಸಿಗರೇಟು ಸೇದುವುದು, ತಂಬಾಕು ಅಗಿಯುವುದು, ಡ್ರಗ್ಸ್ ಬಳಕೆಯಂತೆಯೇ ವಿದ್ಯಾರ್ಥಿಗಳು ಅತಿಯಾದ ಮೊಬೈಲ್ ಬಳಸುವುದು ಕೂಡ ಇತ್ತೀಚಿನ ದಿನಗಳಲ್ಲಿ ವ್ಯಸನವಾಗಿ ಮಾರ್ಪಟ್ಟಿದೆ. ಮಾದಕ ವ್ಯಸನಗಳಿಂದ ಮುಕ್ತರಾಗಲು ನುರಿತ ಉಪನ್ಯಾಸಕರಿಂದ ಉಪನ್ಯಾಸ ಹಮ್ಮಿಕೊಳ್ಳಬೇಕು. ಶಾಲೆಗಳಲ್ಲಿ ಈ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಪ್ರಬಂಧ ಸ್ಪರ್ಧೆಗಳನ್ನು ಸಹ ಹಮ್ಮಿಕೊಂಡು ಉತ್ತಮವಾಗಿ ಪ್ರಬಂಧ ರಚಿಸಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸುವಂತೆ ನಿರ್ದೇಶನ ನೀಡಿದರು.

ನಗರಸಭಾ ವ್ಯಾಪ್ತಿಯಲ್ಲಿ ಮತ್ತೇರಿಸುವ ಗುಟ್ಕಾ ಪೌಚ್‌ಗಳ ಮಾರಾಟ ಕಂಡುಬಂದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಯುವ ಜನತೆ ದುಷ್ಚಟಗಳಿಂದ ದೂರವಿರಬೇಕು ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್.ಎಚ್.ಜಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು, ಆರೋಗ್ಯ ಇಲಾಖೆಯ ಡಾ.ಆದರ್ಶ, ಶಿಕ್ಷಣ ಇಲಾಖೆಯ ಚಿನ್ನಸ್ವಾಮಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ