ಉಡುಪಿ: ಮುಸ್ಲೀಮರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಹೇಳಿರುವ ಚಂದ್ರಶೇಖರನಾಥ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ವಿರೋಧಿಸುತ್ತಿರುವ ಬಿಜೆಪಿಯವರು ಸ್ವಾಮೀಜಿ ಹೇಳಿದಂತೆ ಹೇಳಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನವನ್ನು ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲಾ ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲಾ ? ಒಂದು ಕಡೆ ಪ್ರಧಾನಿ ಮೋದಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಹಾಗಿದ್ದರೆ ಈ ದೇಶದಲ್ಲಿ ರಾಷ್ಟ್ರಪತಿಯಿಂದ ಜನಸಾಮಾನ್ಯರಿಗೂ ಕಾನೂನು ಒಂದೇ ಆಗಬೇಕಲ್ಲವೇ ಎಂದವರು ಪ್ರಶ್ನಿಸಿದರು.