ನೀಟ್ ಅಕ್ರಮ ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸಲಿ

KannadaprabhaNewsNetwork |  
Published : Jun 16, 2024, 01:54 AM ISTUpdated : Jun 16, 2024, 11:16 AM IST
೧೫ಕೆಎಲ್‌ಆರ್-೧೦ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಮಾತನಾಡಿದರು. | Kannada Prabha

ಸಾರಾಂಶ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ರಾಜ್ಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ,

 ಕೋಲಾರ : ದೇಶಾದ್ಯಂತ ನಡೆದ ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ೨೦೨೪ರಲ್ಲಿ ನಡೆದಿರುವ ಅಕ್ರಮದ ಕುರಿತು ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆಗೆ ಆದೇಶಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೀಟ್ ಪರೀಕ್ಷೆಯಿಂದ ದಕ್ಷಿಣ ಭಾರತದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ದೇಶದಲ್ಲಿ ಸುಮಾರು ೪೭೦೦ ಸೆಂಟರ್‌ಗಳಲ್ಲಿ ನೀಟ್ ಪರೀಕ್ಷೆ ಬರೆದಿದ್ದಾರೆ,

ಒಂದೇ ಕೇಂದ್ರದ 6 ಮಂದಿ ಟಾಪರ್‌?

ಕೆಲವು ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣ ಅಂಕ ಗಳಿಸಿದ್ದು, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ೬ ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ, ಇದು ಅನೇಕ ಅನುಮಾನಗಳು ಮೂಡಿಸಿದೆ, ಈ ಬಗ್ಗೆ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳು ಸಾಕಷ್ಟು ನಷ್ಟ ಅನುಭವಿಸಲಿದ್ದು, ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ, ರಾಜ್ಯಗಳಿಗೆ ಸಿಗಬೇಕಾದ ಶೇ.೧೫ ಮೀಸಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸ್ಸು ನುಚ್ಚು ನೂರಾಗಿ, ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಹೊಣೆ ಯಾರದ್ದು ಎಂದು ಪ್ರಶ್ನಿಸಿದರು.ಉತ್ತರ ಭಾರತೀಯರ ಮೇಲುಗೈ

ಪ್ರತಿ ಸಾಲಿನಲ್ಲಿ 3 ರಿಂದ 4 ವಿದ್ಯಾರ್ಥಿಗಳು ಟಾಪರ್ ಬರುತ್ತಿದ್ದರು, ಆದರೆ ಈ ಭಾರಿ ಸರಿ ಸುಮಾರು ೬೦ಕ್ಕಿಂತ ಹೆಚ್ಚು ಜನ ಉತ್ತರ ಭಾರತದವರೇ ಟಾಪರ್‌ಗಳಾಗಿರುವುದು ಎಲ್ಲರ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ, ನಮಗೆ ಇರುವ ಮಾಹಿತಿ ಪ್ರಕಾರ ವೃತ್ತಿಪರ ಡಾಕ್ಟರ್‌ಗಳೇ ಈ ಪರೀಕ್ಷೆ ಬರೆದಿದ್ದು, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಬಿಡುಗಡೆ ಗೊಂಡಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕೆಲವು ರಾಜ್ಯಗಳಲ್ಲಿ ಪರೀಕ್ಷೆ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಸರಬರಾಜಾಗಿದೆ. ಅದಕ್ಕಾಗಿ 60 ರಿಂದ 70 ಗ್ರೇಸ್ ಮಾರ್ಕ್ಸ್ ನೀಡಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸೀಟುಗಳೆಲ್ಲ ಉತ್ತರ ಭಾರತ ವಿದ್ಯಾರ್ಥಿಗಳ ಪಾಲಾಗಿವೆ ಎಂದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ರಮೇಶ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ್, ನಗರ ಘಟಕದ ಅಧ್ಯಕ್ಷ ನಿಸ್ವಾನ್ ಇದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌