ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಮಧ್ಯ ಪ್ರವೇಶಿಸಲಿ

KannadaprabhaNewsNetwork |  
Published : Aug 13, 2024, 12:53 AM ISTUpdated : Aug 13, 2024, 12:54 AM IST
ಹೊನ್ನಾಳಿ ಫೋಟೋ 12ಎಚ್.ಎಲ್.ಐ3.  ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ  ಕಗ್ಗೋಲೆ ಹಾಗೂ ಅತ್ಯಾಚಾರ ನಡೆಯುತ್ತಿರುವುದನ್ನು ಖಂಡಿಸಿ ಕೂಡಲೆ ಅವರಿಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಹೊನ್ನಾಳಿ, ನ್ಯಾಮತಿ ಹಿಂದು ಹಿತ ರಕ್ಷಣಾ ಸಮಿತಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಬಟನೆ ನಡೆಸಿ, ಉಪ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ನೆರೆಯ ಬಾಂಗ್ಲಾ ದೇಶದಲ್ಲಿ ವಾಸವಿರುವ ಎಲ್ಲ ಹಿಂದೂಗಳನ್ನು ರಕ್ಷಿಸಿ, ಅವರಿಗೆ ಜೀವ ಭದ್ರತೆ ಒದಗಿಸಬೇಕು. ಹಿಂದೂ ಕುಟುಂಬಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಅಲ್ಲಿನ ಭಯೋತ್ಪಾದಕರ ವಿರುದ್ದ ಕೂಡಲೇ ಕ್ರಮ ಜರುಗಿಸಬೇಕು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ, ಹಿಂದೂಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರು ಹೊನ್ನಾಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಆಗ್ರಹ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ನೆರೆಯ ಬಾಂಗ್ಲಾ ದೇಶದಲ್ಲಿ ವಾಸವಿರುವ ಎಲ್ಲ ಹಿಂದೂಗಳನ್ನು ರಕ್ಷಿಸಿ, ಅವರಿಗೆ ಜೀವ ಭದ್ರತೆ ಒದಗಿಸಬೇಕು. ಹಿಂದೂ ಕುಟುಂಬಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಅಲ್ಲಿನ ಭಯೋತ್ಪಾದಕರ ವಿರುದ್ದ ಕೂಡಲೇ ಕ್ರಮ ಜರುಗಿಸಬೇಕು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ, ಹಿಂದೂಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರು ಪ್ರತಿಭಟನೆ ನಡೆಸಿದರು.

ಸಮಿತಿ ಹಾಗೂ ಬಿಜೆಪಿ ಮುಖಂಡ ಎ.ಬಿ.ಹನುಮಂತಪ್ಪ ಮಾತನಾಡಿ, ಬಾಂಗ್ಲಾ ದೇಶದಲ್ಲಿ ರಾಜಕೀಯ ಅರಾಜಕತೆಯ ಹಿನ್ನೆಲೆ ಸಾಕಷ್ಟು ಗಲಭೆಗಳು ನಡೆಯುತ್ತಿವೆ. ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೋಮುವಾದಿ ಮನಸ್ಸುಗಳು ಕಗ್ಗೊಲೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಹಿಂದೂ ಹೆಣ್ಣುಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಖಂಡನೀಯ ಎಂದು ಹೇಳಿದರು.

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಕೊಲೆ, ಸುಲಿಗೆ ಹಾಗೂ ಅತ್ಯಾಚಾರಗಳು ನಡೆಯುತ್ತಿರುವುದು ಗಮನಿಸಿದರೆ 1947 ರಲ್ಲಿ ಪಾಕಿಸ್ತಾನದಲ್ಲಿ ನಡೆದ ಘಟನೆ ಮರುಕಳಿಸಿದಂತಾಗಿದೆ. ಯಾರೂ ಹಿಂದೂಗಳ ರಕ್ಷಣೆಗೆ ಬಾರದ ಹಿನ್ನೆಲೆ ಬಾಂಗ್ಲಾ ಹಿಂದೂಗಳೇ ತಮ್ಮ ಆತ್ಮರಕ್ಷಣೆಗೆ ಮಾಡಿಕೊಳ್ಳುತ್ತಿದ್ದಾರೆ. ಪ್ರಾಣಭಯದಿಂದ ನಲುಗುತ್ತಿದ್ದಾರೆ. ಬಹಳಷ್ಟು ಹಿಂದೂಗಳು ಬಾಂಗ್ಲಾ ಬಿಟ್ಟು ಭಾರತದ ಗಡಿಯಲ್ಲಿ ಪ್ರಾಣ ಉಳಿಸಿ ಎಂದು ಮನವಿ ಮಾಡುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಬಾಂಗ್ಲಾ ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಿತಿ ಸದಸ್ಯರು 1 ಗಂಟೆ ಕಾಲ ಮಾನವ ಸರಪಳಿ ನಿರ್ಮಿಸಿದರು. ಅಲ್ಲಿಂದ ತಾಲೂಕು ಕಚೇರಿವರೆಗೆ ಬಾಂಗ್ಲಾ ಕೋಮುವಾದಿಗಳ ವಿರುದ್ಧ ಧಿಕ್ಕಾರ ಕೂಗುತ್ತ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಉಪ ತಹಸೀಲ್ದಾರ್ ಸುಭಾಷ್‌ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆ ಪ್ರಮುಖರಾದ ಅರುಣ್‌ಕುಮಾರ್, ವೈದ್ಯ ಜಿತೇಂದ್ರ, ಪ್ರಮೀಣ್ ರಾಂಪುರ, ಪತ್ರಕರ್ತ ಶ್ರೀನಿವಾಸ್, ವಕೀಲ ಎಸ್.ಎನ್. ಪ್ರಕಾಶ್, ಭರತ್ ಸತ್ತಿಗಿ, ಬಿಜೆಪಿ ಮುಖಂಡರಾದ ಎ.ಬಿ. ಹನುಮಂತಪ್ಪ, ಶಾಂತರಾಜ್‌ ಪಾಟೀಲ್, ಎಂ.ಆರ್. ಮಹೇಶ್, ಶಿವಾನಂದ್, ಕೆ.ವಿ. ಚನ್ನಪ್ಪ, ಮಹೇಶ್ ಹುಡೇದ್, ಹರ್ಷ ಪೇಟೆ, ಸುಹಾಸ್‌ ಸಿ.ಕೆ. ರವಿ, ನಟರಾಜ್, ಪ್ರಭು, ಹರ್ಷ ಪಟೇಲ್ ಹಾಗೂ ಇತರರು ಭಾಗವಹಿಸಿದ್ದರು.

- - - -12ಎಚ್.ಎಲ್.ಐ3:

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಕಗ್ಗೊಲೆ ಹಾಗೂ ಅತ್ಯಾಚಾರ ಖಂಡಿಸಿ ಕೂಡಲೇ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಹೊನ್ನಾಳಿ, ನ್ಯಾಮತಿ ಹಿಂದೂ ಹಿತರಕ್ಷಣಾ ಸಮಿತಿ ಸದಸ್ಯರು ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ