ಕನ್ನಡಪ್ರಭ ವಾರ್ತೆ ಯಾದಗಿರಿ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187ಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187ಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ನೈತಿಕ ಹೊಣೆ ಹೊತ್ತು, ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು. ಈ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ ಹಿನ್ನೆಲೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಅಲ್ಲದೇ, ಈ ಹಗರಣದ ಕಿಂಗ್‌ಪಿನ್ ಯಾರು ಎಂಬುದು ಬಯಲಾಗಬೇಕು ಎಂದು ಒತ್ತಾಯಿಸಿದರು.
ಆತ್ಮಹತ್ಯೆ ಮಾಡಿಕೊಂಡ ಕಚೇರಿ ಅಧೀಕ್ಷಕ ಚಂದ್ರಶೇಖರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅನುಮಾನವಿದೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಯಂಕ್ಷಿಂತಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಕಾಮಾ, ಪರುಶುರಾಮ ಕುರಕುಂದಿ, ಮೆಲಪ್ಪ ಗುಳಗಿ, ದೇವಿಂದ್ರನಾಥ ನಾದ, ವೆಂಕಟರಡ್ಡಿ ಅಬ್ಬೆತುಮಕೂರು, ಬಸವರಾಜ ವಿಭೂತಿಹಳ್ಳಿ, ದೇವರಾಜ ನಾಯಕ, ನಗರಸಭೆ ಸದಸ್ಯ ವಿಲಾಸ ಪಾಟೀಲ್, ಸ್ವಾಮಿದೇವ ದಾಸನಕೇರಿ, ಶ್ರೀದೇವಿ ಶೆಟ್ಟಿಹಳ್ಳಿ, ಮಂಜುನಾಥ ಜಡಿ, ವೀಣಾ ಮೋದಿ, ಶಂಕರ್ ಕರಣಗಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಶಹಾಪುರ ಮಂಡಲ ಅಧ್ಯಕ್ಷ ಚಂದ್ರಶೇಖರ ಕಂಬಾರ, ಮಲ್ಲಿಕಾರ್ಜುನ ಕಟ್ಟಿಮನಿ, ಕರಬಸಪ್ಪ ಬಿಳಾರ, ಗೋವಿಂದಪ್ಪ ಖಾನಾಪುರ ಇತರರಿದ್ದರು.