ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮುಖ್ಯಮಂತ್ರಿ ವಿಶೇಷ ಅನುದಾನ, ಶಾಸಕರ ಅನುದಾನ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ಹಣದಲ್ಲಿ ನಿರಂತರವಾಗಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಕಾಮಗಾರಿಗಳ ಗುಣಮಟ್ಟ ಹಾಗೂ ನಿಯಮಿತ ಸಮಯದಲ್ಲಿ ಸಾರ್ವಜನಿಕ ಬಳಕೆಗೆ ಈ ಭಾಗದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಇದರಿಂದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಜಂಟಿ ಸಹಯೋಗದಲ್ಲಿ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೆ ನಮ್ಮನ್ನು ಸಂಪರ್ಕಿಸಬೇಕು ಎಂದರು.
ಬಮೂಲ್ ಉಪಾಧ್ಯಕ್ಷ ಕೆಎಂಎ ಮಂಜುನಾಥ್, ತಾಪಂ ಇಒ ಸಿಎನ್ ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್, ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಸಂತೋಷ್, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜ್, ಮಾರೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬು ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ರೆಡ್ಡಿ, ಪಂಚಾಯತಿ ಸದಸ್ಯೆ ರತ್ನಾ ಗೋವಿಂದರಾಜ್, ಭೂಧನಹೊಸಳ್ಳಿ ಪ್ರಕಾಶ್, ಕೃಷ್ಣ ರೆಡ್ಡಿ, ಪ್ರದೀಪ್ ಇದ್ದರು.ಫೋಟೋ: 10 ಹೆಚ್‌ಎಸ್‌ಕೆ 1