ಡಯಾಲಿಸಿಸ್ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿ

KannadaprabhaNewsNetwork |  
Published : Sep 21, 2024, 01:51 AM IST
ಗಗಗಗಗ | Kannada Prabha

ಸಾರಾಂಶ

ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿದರೇ ಸಾವಿರಾರು ರುಪಾಯಿ ಖರ್ಚು ಆಗುತ್ತದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಆಲಮೇಲ

ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿದರೇ ಸಾವಿರಾರು ರುಪಾಯಿ ಖರ್ಚು ಆಗುತ್ತದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆಲಮೇಲ ಹಾಗೂ ಡಿಸಿಡಿಸಿ ಕಿಡ್ನಿ ಕೇರ್ ಸಂಯುಕ್ತಾಶ್ರಯದಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್‌ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು. ವಿಜಯಪುರ ಡಿಎಚ್ಒ ಡಾ.ಸಂಪತ ಗುಣಾರಿ ಮಾತನಾಡಿ, ರೋಗಿಗೆ ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗವಾಗಿದೆ. ಜನ ಆರೋಗ್ಯಯುತವಾಗಿರಲಿ ಎಂಬ ಉದ್ದೇಶದಿಂದ ಸರ್ಕಾರವು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಜನ ಸಾಮಾನ್ಯರು ಸಹಕಾರ ಮಾಡಿದರೇ ಮಾತ್ರ ನಾವು ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೋಮಯ್ಯ ಸ್ವಾಮೀಜಿ, ಡಾ.ಸಂದೀಪ ಜೆ.ಪಾಟೀಲ, ಆಲಮೇಲ ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ, ಸಿಂದಗಿ ತಾಲೂಕು ಆರೋಗ್ಯಧಿಕಾರಿ ಡಾ.ಎ.ಎ.ಮಾಗಿ, ಆಲಮೇಲ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ ಆಕಾಶಿ, ಚಿಕ್ಕಮಕ್ಕಳ ತಜ್ಞ ಡಾ.ರಾಜೇಶ ಪಾಟೀಲ, ನೇತ್ರಾಧಿಕಾರಿ ಸುರೇಶ ಮಹೇಂದ್ರಕರ, ಅಶೋಕ ತೆಲ್ಲೂರ, ಪ.ಪಂ ಸದಸ್ಯ ರಾಹುಲ ಎಂಟಮಾನ, ಗುತ್ತಿಗೆದಾರ ವೀರಭದ್ರ ಕತ್ತಿ, ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಭಂಟನೂರ, ಭೀಮು ಬಮ್ಮನಹಳ್ಳಿ, ಬಾಬು ಕೋತ್ತಂಬರಿ, ದಯಾನಂದ ನಾರಾಯಣಕರ, ಸಂತೋಷ ಜರಕರ, ಶಶಿ ಗಣಿಯಾರ, ಪುಂಡಲೀಕ ದೊಡ್ಡಮನಿ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪಟ್ಟಣದ ಮುಖಂಡರಿದ್ದರು.

ಆರೋಗ್ಯ ಕೇಂದ್ರಕ್ಕೆ ಮೂಲಭೂತ ಸೌಲಭ್ಯ, ವೈದ್ಯರ ಕೊರತೆ ನೀಗಿಸಲು ಮನವಿ

ಆಲಮೇಲ:

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆಲಮೇಲ ಹಾಗೂ ಡಿಸಿಡಿಸಿ ಕಿಡ್ನಿ ಕೇರ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟಿನಾ ಸಮಾರಂಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿಯವರಿಗೆ ವೈದ್ಯಾಧಿಕಾರಿಗಳ ತಂಡ ಆಲಮೇಲ ಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲಭೂತ ಸೌಲಭ್ಯ ಒದಗಿಸಬೇಕು ಹಾಗೂ ವೈದ್ಯರ ಕೊರತೆಯನ್ನು ನೀಗಿಸಬೇಕು ಎಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ.ಸಂಪಂತ ಗುಣಾರಿ, ಡಾ.ಅಪ್ಪಾಸಾಹೇಬ ಇನಾಮದಾರ, ಡಾ.ಎ.ಎ.ಮಾಗಿ, ಡಾ.ಮಂಜುನಾಥ ಆಕಾಶಿ, ನೇತ್ರಾಧಿಕಾರಿ ಸುರೇಶ ಮಹೇಂದ್ರಕರ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ