ಜನಪದ ಕಳೆಗಳು ಮುಂದಿನ ಪೀಳಿಗೆಗೆ ಉಳಿಯಲಿ

KannadaprabhaNewsNetwork |  
Published : Mar 22, 2025, 02:01 AM IST
ಗುಬ್ಬಿ ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ನಲ್ಲಿ ಏರ್ಪಡಿಸಿದ್ದ ಜಾನಪದ ಉತ್ಸವ-2025, ನಮ್ಮ ಸಂಸ್ಕೃತಿ – ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಬಿ. ಜಯಶ್ರೀ . | Kannada Prabha

ಸಾರಾಂಶ

ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಪ್ರಗತಿಕವಾಗಿದ್ದು ಅವು ಮುಂದಿನ ತಲೆಮಾರಿಗೆ ಉಳಿದು ಬೆಳೆಯುವಂತಾಗಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಬಿ. ಜಯಶ್ರೀ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಪ್ರಗತಿಕವಾಗಿದ್ದು ಅವು ಮುಂದಿನ ತಲೆಮಾರಿಗೆ ಉಳಿದು ಬೆಳೆಯುವಂತಾಗಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಬಿ. ಜಯಶ್ರೀ ತಿಳಿಸಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ)ನಲ್ಲಿ ಏರ್ಪಡಿಸಿದ್ದ ಜಾನಪದ ಉತ್ಸವ-2025, ನಮ್ಮ ಸಂಸ್ಕೃತಿ – ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಾನಪದ ಕಲೆಗಳು ನಮ್ಮ ಸಂಸ್ಥೆಯ ಹಿರಿಮೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುಂದುವರಿಸುವ ಕಲಾವಿದರ ಕಾರ್ಯ ಶ್ಲಾಘನೀಯ.

ಯುವಜನತೆ ಇಂತಹ ಕಲಾ ಪ್ರಕಾರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ಕಲೆಯ ಉಳಿಯುವುದು ಮುಂದಾಗಬೇಕು ಎಂದು ಸಲಹೆ ನೀಡಿದರು, ಕಲಾವಿದರು ಜಾನಪದ ತಂಡಗಳನ್ನು ಮಾಡಿಕೊಂಡು ದೇಶದ ಮೂಲೆ ಮೂಲೆಗಳಲ್ಲಿ ಪ್ರದರ್ಶನ ನೀಡಬೇಕು. ಆಗ ಮಾತ್ರ ನಮ್ಮ ಕಲೆ, ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದರು. ಪ್ರಾಂಶುಪಾಲ ಪ್ರಸನ್ನ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೂಕ್ತ ಪ್ರತಿಭೆ ಅಡಕವಾಗಿದ್ದು, ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ, ಜಾನಪದ ಸೊಗಡು ಸೇರಿದಂತೆ ಎಲ್ಲವನ್ನು ಮೈಗೂಡಿಸಿಕೊಂಡು ಮೂಲ ಸಂಸ್ಕೃತಿಯನ್ನು ಉಳಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಡಾ. ನಾಗರಾಜು, ಪ್ರಾಂಶುಪಾಲ ಪ್ರೊ ಕರಿಯಣ್ಣ, ಶ್ರೀಧರ್, ದೊಡ್ಡತಿಮ್ಮಯ್ಯ, ಜಾನಪದ ಕಲಾವಿದೆ ತಮಟೆ ನರಸಮ್ಮ, ವ್ಯವಸ್ಥಾಪಕ ಎನ್ ಶಿವಯ್ಯ, ಹರಿಕಥ ವಿದ್ವಾಂಸ ಶಿವಸ್ವಾಮಿ , ಅತಿಥಿ ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜಿನ ಎಲ್ಲಾ ಘಟಕಗಳ ಸಂಚಾಲಕರು ಮತ್ತು ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!