ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು
ಜಿಲ್ಲೆಯ ರೈತರಿಗೆ ನೀರು ಒದಗಿಸುವ ದೃಷ್ಟಿಯಿಂದ ಸರ್ಕಾರ ಬೇಡ್ತಿ-ವರದಾ ನದಿ ಜೋಡಣೆ ಮಾಡಲೇಬೇಕು ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಸೋಮವಾರ ಹಾವೇರಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಇಲ್ಲಿಂದ ಬೇಡಿಕೆ ಕಳುಹಿಸಿದರೆ ಕೇಂದ್ರದಲ್ಲಿ ಜಾರಿ ಆಗಲಿದೆ. ಇದಕ್ಕೆ ಯಾರೇ ವಿರೋಧ ಮಾಡಿದರೂ ಸರ್ಕಾರ ಹಿಂದೇಟು ಹಾಕದೇ ಜಾರಿ ಮಾಡಬೇಕು. ಈ ಬಗ್ಗೆ ನಾನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೇ ಒತ್ತಾಯಿಸಿದ್ದೇನೆ. ಆದರೆ ಇನ್ನೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಮೂಲಕವಾದರೂ ಹಕ್ಕೋತ್ತಾಯ ಹೋದ ಮೇಲೆ ಮಾಡಬೇಕು ಎಂದು ಒತ್ತಾಯಿಸಿದರು.
ವಿವೇಕಾನಂದ ಆಶ್ರಮದ ಪ್ರಕಾಶಾನಂದ ಸ್ವಾಮೀಜಿ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಪ್ರಮುಖರಾದ ಪುಟ್ಟಪ್ಪ ಮರಿಯಮ್ಮನವರ, ಏಕನಾಥ ಬಾನುವಳ್ಳಿ, ಎಸ್.ಎಸ್. ರಾಮಲಿಂಗಣ್ಣನವರ, ಮಂಜುನಾಥ ಓಲೇಕಾರ, ಪ್ರಕಾಶ ಜೈನ್, ಡಾ. ಬಸವರಾಜ ಕೇಲಗಾರ, ಕೆ.ಎಚ್. ಮುಕ್ಕಣ್ಣನವರ, ಡಾ. ಅನಿಲ ಬೆನ್ನೂರ, ಡಾ. ನಾಗರಾಜ, ಭಾರತಿ ಜಂಬಗಿ, ವಸಂತಾ ಹುಲ್ಲತ್ತಿ ಹಾಗೂ ಕಸಾಪ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಹಲಗೇರಿಯಲ್ಲಿ ಪಾಟೀಲ ಪುಟ್ಟಪ್ಪ ಅವರ ಸ್ಮಾರಕ ಭವನ ನಿರ್ಮಿಸಬೇಕು.
ಹಾವೇರಿ ಜಿಲ್ಲೆಗೆ ಕೆಸಿಸಿ ಬ್ಯಾಂಕ್ ಪ್ರತ್ಯೇಕಗೊಳಿಸಬೇಕು.