ಸರ್ಕಾರ ಜಾತಿ ಗಣತಿ ವರದಿ ಶೀಘ್ರ ಜಾರಿಗೊಳಿಸಲಿ : ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ವಿನಯಕುಮಾರ್

KannadaprabhaNewsNetwork |  
Published : Oct 10, 2024, 02:33 AM ISTUpdated : Oct 10, 2024, 12:18 PM IST
Vidhanasoudha

ಸಾರಾಂಶ

ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

 ದಾವಣಗೆರೆ  : ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಬಲಾಢ್ಯ ಸಮುದಾಯವದರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಜಾರಿಗೆ ಹೆಚ್ಚಿನ ಸಮುದಾಯಗಳು ಒತ್ತಾಯಿಸುತ್ತಿವೆ. ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಕೆಲವೇ ಕೆಲ ಸಮುದಾಯದವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದಿದ್ದಾರೆ.

2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಕಾಂತರಾಜ್ ಆಯೋಗ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೆ, ಇದುವರೆಗೆ ಬಿಡುಗಡೆ ಆಗಿಲ್ಲ. ವರದಿ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗ ರಚಿಸಿ ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿತ್ತು. ಆದರೂ ಜಾತಿ ಗಣತಿ ಪ್ರತಿಬಾರಿಯೂ ಆಗುತ್ತಿರಲಿಲ್ಲ. ವಿರೋಧ ವ್ಯಕ್ತವಾಗುತ್ತಿದ್ದ ಕಾರಣಕ್ಕೆ ಅಧಿಕಾರಕ್ಕೆ ಬಂದವರು ಮನಸ್ಸು ಮಾಡಲಿಲ್ಲ. 2014ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಸಿದ್ದರಾಮಯ್ಯ ಅವರು ಆದೇಶಿಸಿದ್ದರು. ಅನಂತರ ಅಧಿಕಾರಕ್ಕೆ ಬಂದವರು ಜಾರಿಗೆ ಮುಂದಾಗಲಿಲ್ಲ. ಇವರಿಗೆ ಮೇಲ್ವರ್ಗದವರ ಮೇಲಿದ್ದ ಭಯ ಎಂದಿದ್ದಾರೆಂದು ತಿಳಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಈ ವರದಿ ಜಾರಿಯಿಂದ ಅನುಕೂಲವಾಗಲಿದೆ. ತಳಸಮುದಾಯ, ಹಿಂದುಳಿದ ಸಮುದಾಯಗಳಿಗೆ ಅನುಕೂಲವಾಗಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಸಹಾಯವಾಗಲಿದೆ. ಆದಕಾರಣ ಆದಷ್ಟು ಬೇಗ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು. ಅನುಮಾನಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಆದರೆ, ಯಾವುದೇ ಪರಾಮರ್ಶೆ ನಡೆಸದೇ, ಪೂರ್ಣವಾಗಿ ಓದದೇ ವರದಿ ಜಾರಿಗೆ ವಿರೋಧ ಸರಿಯಲ್ಲ ಎಂದು ಹೇಳಿಕೆಯಲ್ಲಿ ಅಭಿಪ್ರಾಯಿಸಿದ್ದಾರೆ.

- - - -9ಕೆಡಿವಿಜಿ31ಃ: ಜಿ.ಬಿ.ವಿನಯ್ ಕುಮಾರ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಳು ಬಿದ್ದ ಸರ್ಕಾರಿ ವಸತಿ ಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಕಡಪಟ್ಟಿ ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ