ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.
ಹಾನಗಲ್ಲ: ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.
ಹಾನಗಲ್ಲ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ, ವೀರರಾಣಿ ಕಿತ್ತೂರು ಚೆನ್ನಮ್ಮ ಯುವಸೇನೆ, ಶ್ರೀವೀರಭದ್ರೇಶ್ವರ ಪಂಚ ಕಮಿಟಿ, ವೀರಭದ್ರೇಶ್ವರ ಕಲಾ ಭಜನಾ ಸಂಘ ಸಂಯುಕ್ತವಾಗಿ ಆಯೋಜಿಸಿದ ಕಿತ್ತೂರ ಚೆನ್ನಮ್ಮನ ೨೦೦ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕೆ, ಇಡೀ ಮಹಿಳಾ ಕುಲಕ ಹೆಮ್ಮೆ ಅವರಾಗಿದ್ದಾರೆ. ಸಂಗೊಳ್ಳಿ ರಾಯಣ್ಣ, ಅಬಟೂರು ಬಾಳಪ್ಪ ಸೇರಿದಂತೆ ನೂರಾರು ವೀರ ಯೋಧರನ್ನು ಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆ ಎಂದರು.ಮಾಜಿ ಜಿಪಂ ಸದಸ್ಯ ಮಾಲತೇಶ ಸೊಪ್ಪಿನ ಮಾತನಾಡಿ, ಇಂದಿನ ಮಕ್ಕಳಿಗೆ ವೀರರಾಣಿ ಕಿತ್ತೂರು ಚೆನ್ನಮ್ಮನ ಆದರ್ಶಗಳನ್ನು ತಿಳಿಸಬೇಕಾಗಿದೆ. ಭಾರತ ಸ್ವಾತಂತ್ರ್ಯಕ್ಕಾಗಿ ಇಡೀ ಬದುಕನ್ನೇ ಮೀಸಲಾಗಿಟ್ಟ ಮಹನೀಯರ ಆದರ್ಶ ಹೋರಾಟದಿಂದಾಗಿಯೇ ಸ್ವತಂತ್ರ ಭಾರತದಲ್ಲಿದ್ದೇವೆ ಎಂದರು.ಮುಖ್ಯ ಅತಿಥಿಗಳಾಗಿ ರಾಜು ಹಲಸೂರ ಮಾತನಾಡಿ, ಪಂಚಮಸಾಲಿ ಸಮುದಾಯ ರೈತ ಸಮುದಾಯವಾಗಿದೆ. ಆದರೆ ಅತಿವೃಷ್ಟಿ, ಅನಾವೃಷ್ಟಿಗಳ ಹೊಡೆತಕ್ಕೆ ಸಿಕ್ಕು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆದರೆ ಮೀಸಲಾತಿಯಲ್ಲಿಯೂ ಈ ಸಮಾಜಕ್ಕೆ ಅನ್ಯಾಯವಾಗಿದೆ. ಸರಕಾರ ಕೂಡಲೇ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.ಗ್ರಾಪಂ ಅಧ್ಯಕ್ಷೆ ರೇಣುಕಾ ಅಜಗುಂಡಿ, ಉದ್ಯಮಿ ಸಿದ್ದಲಿಂಗಪ್ಪ ಕಮಡೊಳ್ಳಿ, ಫಕ್ಕೀರೇಶ ಮಾವಿನಮರದ, ರಾಜಣ್ಣ ಅಕ್ಕಸಾಲಿ, ಮಾಂತೇಶ ಮೂಡುರ, ಮಂಜುನಾಥ ದೊಡ್ಡಮನಿ, ಬಸವರಾಜ ಅಗಸನಹಳ್ಳಿ, ಷಣ್ಮುಕಯ್ಯ ಹಿರೇಮಠ, ಬಾಪುಗೌಡ ಪಾಟೀಲ, ಬಸಪ್ಪ ಶಿವಣ್ಣನವರ, ಬಸಪ್ಪ ಬೈಲಣ್ಣನವರ, ಶಂಕರ ಅಗಸನಹಳ್ಳಿ, ವಿರುಪಾಕ್ಷಿ ಕೂಡಲ, ಪಂಚಾಕ್ಷರಿ ಕುಲಕರ್ಣಿ ಮೊದಲಾದವರು ವೇದಿಕೆಯಲ್ಲಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.