ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಪಿಐ ರವಿ

KannadaprabhaNewsNetwork |  
Published : Jul 30, 2024, 12:33 AM IST
ನ್ಯಾಮತಿ  | Kannada Prabha

ಸಾರಾಂಶ

ಪತ್ರಿಕೆಗಳು ಸಮಾಜದಲ್ಲಿ ನೈತಿಕತೆ ಮತ್ತು ಸಾಮರಸ್ಯ ರಕ್ಷಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜಾತಿ, ಧರ್ಮ, ಬಡವ ಹಾಗೂ ಶ್ರೀಮಂತ ಎನ್ನುವ ಸಂಕೋಲೆಗಳಿಂದ ದೂರವಿದ್ದು, ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ ಎಂದು ನ್ಯಾಮತಿ ಪೊಲೀಸ್ ಠಾಣೆ ಪಿಐ ಎನ್.ಎಸ್.ರವಿ ಹೇಳಿದ್ದಾರೆ.

- ನ್ಯಾಮತಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನ - - - ಕನ್ನಡಪ್ರಭ ವಾರ್ತೆ, ನ್ಯಾಮತಿ

ಪತ್ರಿಕೆಗಳು ಸಮಾಜದಲ್ಲಿ ನೈತಿಕತೆ ಮತ್ತು ಸಾಮರಸ್ಯ ರಕ್ಷಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜಾತಿ, ಧರ್ಮ, ಬಡವ ಹಾಗೂ ಶ್ರೀಮಂತ ಎನ್ನುವ ಸಂಕೋಲೆಗಳಿಂದ ದೂರವಿದ್ದು, ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ ಎಂದು ನ್ಯಾಮತಿ ಪೊಲೀಸ್ ಠಾಣೆ ಪಿಐ ಎನ್.ಎಸ್.ರವಿ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ನ್ಯಾಮತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗವು ಬಡವರು, ಅಸಹಾಯಕರಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಸಮಾಜದ ಧ್ವನಿಯಾಗಿವೆ. ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸಮಾಜದಲ್ಲಿ ದೋಷಗಳನ್ನು ತಿದ್ದುವ ಕೆಲಸ ಮಾಡುತ್ತಿವೆ. ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ, ಪರಿಹಾರಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ಪತ್ರಿಕಾ ದಿನ ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಮಾತನಾಡಿ, ಸಮಾಜದ ಅಂಕುಡೊಂಕುಗಳನ್ನು ತಿದ್ಧಿ ತೀಡಿ, ವಸ್ತುನಿಷ್ಠ ವರದಿಗಳನ್ನು ಪ್ರಕಟಿಸುವ ಮೂಲಕ ಪತ್ರಿಕೆಗಳು ಇಂದಿಗೂ ಜನರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿವೆ ಎಂದರು.

ತಾಲೂಕು ರೈತ ಸಂಘ ಅಧ್ಯಕ್ಷ, ಕೃಷಿ ಪಂಡಿತ ಪ್ರಶಸ್ತಿ ವಿಜೇತ ಬೆಳಗುತ್ತಿ ಉಮೇಶ್, ಅಧ್ಯಕ್ಷತೆ ವಹಿಸಿದ್ದ ನ್ಯಾಮತಿ ಘಟಕದ ಸಂಚಾಲಕ ಎಂ.ಎಸ್. ಶಾಸ್ತ್ರಿ ಹೊಳೆಮಠ ಮಾತನಾಡಿದರು. ಹಿರಿಯ ಪತ್ರಕರ್ತರಾದ ಶಿವರುದ್ರಯ್ಯ ಹಿರೇಮಠ, ಎಂ.ಪಿ.ಎಂ. ಷಣ್ಮುಖಯ್ಯ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೃದ್ಧಿನ್, ಸಹ ಕಾರ್ಯದರ್ಶಿ ವೀರೇಶ್, ವೇದಮೂರ್ತಿ, ಉಪನ್ಯಾಸಕರಾದ ನಾಗರಾಜ್, ನವುಲೆ ಗಂಗಾಧರ್, ರೈತ ಮುಖಂಡ ಹೊಸಮನೆ ಮಲ್ಲಿಕಾರ್ಜುನ ಕುಂಬಾರ, ಸಾಮಾಜಿಕ ಕಾರ್ಯಕರ್ತ ಡಿ.ಎಂ. ವಿಜೇಂದ್ರ ಮಹೇಂದ್ರಕರ್, ಸದಾಶಿವಯ್ಯ ಹಿರೇಮಠ, ಷಣ್ಮುಖ ಬಿ.ಇ., ಹಳದಪ್ಪ, ರಾಂಪುರ ಹಾಲೇಶ್, ಗಿರೀಶ್‌ ನಾಡಿಗ್, ರಮೇಶ್ ಮಡಿವಾಳ ಮತ್ತಿತರರಿದ್ದರು.

- - - (-ಫೋಟೋ):

ನ್ಯಾಮತಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನ ಕಾರ್ಯಕ್ರಮವನ್ನು ಸ್ಥಳೀಯ ಪೊಲೀಸ್ ಠಾಣೆ ಪಿಐ ಎನ್.ಎಸ್.ರವಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ