ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಲಿ

KannadaprabhaNewsNetwork | Published : Apr 13, 2024 1:07 AM

ಸಾರಾಂಶ

ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಗಿರೀಶ್ ಪದಕಿ ಹೇಳಿದರು.

ಬ್ಯಾಡಗಿ: ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಗಿರೀಶ್ ಪದಕಿ ಹೇಳಿದರು.

ಮೋಟೆಬೆನ್ನೂರಿನ ಸರ್ಕಾರಿ ಹಿರಿಯ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಬರಗಾಲದ 41 ದಿನಗಳ ಅವಧಿಗೆ ಬಿಸಿಯೂಟ ವಿತರಿಸುವ ತಾಲೂಕು ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಯೋಜನೆಗಳು ಜನರಿಗೆ ತಲಪುತ್ತಿಲ್ಲ ಎಂಬ ಆರೋಗಳು ಕೇಳಿ ಬರುತ್ತಿವೆ, ಅಧಿಕಾರಿಗಳ ಹೊಣೆಗಾರಿಕೆಯನ್ನೂ ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಚುನಾವಣೆ ಸಮಯವಾಗಿದ್ದರಿಂದ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕೇಂದ್ರ ಸರ್ಕಾರ ನಿಗದಿಪಡಿಸಿದ ಯೋಜನೆ ಸಾಕಾರಗೊಳಿಸಬೇಕಾಗಿದೆ. ಬಿಸಿಲಿನ ತೀವ್ರತೆ ಹೆಚ್ಚಾಗಿದ್ದರಿಂದ ಮಕ್ಕಳು ಶಾಲೆಗೆ ಬಂದು ಊಟದ ಜೊತೆಗೆ ತಮಗೆ ಆಸಕ್ತಿ ಇರುವ ಕಲಿಕಾ ಚಟುವಟಿಕೆಯಲ್ಲಿ ಭಾಗವಹಿಸಿ ಉಪಯೋಗಪಡೆದುಕೊಳ್ಳಲು ಕರೆ ನೀಡಿದರು.

ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಮಾತನಾಡಿ, ಮಧ್ಯಾಹ್ನದ ಬಿಸಿಯೂಟದ ಯೋಜನೆ ಕೇವಲ ಶಾಲಾ ಅವಧಿಯಲ್ಲಿ ಮಾತ್ರವಲ್ಲವೇ ರಜೆಯಲ್ಲಿ ಊಟ ನೀಡುವುದರಿಂದ ಮಕ್ಕಳು ಬರಗಾಲದ ಅವಧಿಯಲ್ಲಿ ಶಾಲೆಗೆ ಆಗಮಿಸಿ, ಊಟದ ಜೊತೆಗೆ ಪಾಠ ಮತ್ತು ಕಲಿಕೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು,

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಮಾತನಾಡಿ ಪ್ರಧಾನ ಮಂತ್ರಿ ಪೋಶನ್ ಶಕ್ತಿ ನಿರ್ಮಾಣ ಯೋಜನೆಯಡಿ ಮಕ್ಕಳು ರಜೆ ಅವಧಿಯಲ್ಲಿ ನಿರಂತರವಾಗಿ ಆಗಮಿಸಿ ಊಟದ ಜೊತೆಗೆ ಕಲಿಕಾ ಚಟುವಟಿಕೆಯಲ್ಲಿ ಭಾಗವಹಿಸಲು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಸಹಾಯಕ ನಿರ್ದೇಶಕ ಎನ್. ತಿಮ್ಮಾರೆಡ್ಡಿ ಮಾತನಾಡಿ, ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಸರ್ಕಾರದ ಸೂಚನೆಯಂತೆ ಒಟ್ಟು 41 ದಿನಗಳ ಅವಧಿಗೆ ಬರಗಾಲ ಅವಧಿಯಲ್ಲಿ ಬಿಸಿಯೂಟ ನೀಡಲು ತಾಲೂಕಿನ 77 ಕೇಂದ್ರಗಳಲ್ಲಿ 8785 ಮಕ್ಕಳ ಪಾಲಕರ ಒಪ್ಪಿಗೆ ಪತ್ರ ನೀಡಿರುತ್ತಾರೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲಿ ಬಿಸಿಯೂಟ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯೂಟ ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಜಿ.ಬಿ. ಮಾಗಳ ಅಮಾತಿಗೌಡರು, ಬಾಲಮ್ಮನವರ, ಖತೀಬ್ ಎನ್‌ಜಿಒ ಶಿಕ್ಷಕಿ ಭೂಮಿಕ ಅಡುಗೆ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು.

Share this article