ಗ್ಯಾರಂಟಿಗಳು ಫಲಾನುಭವಿಗಳಿಗೆ ತಲುಪಲಿ: ಮಧು

KannadaprabhaNewsNetwork |  
Published : Aug 28, 2026, 02:00 AM IST
ಪೊಟೋ: 26ಎಸ್‌ಎಂಜಿಕೆಪಿ08 | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸೂಚಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸೂಚಿಸಲಾಯಿತು.ನಗರದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.ಸಭೆಯಲ್ಲಿ ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗೆ ಪರಿವರ್ತನೆಯಾದ ಫಲಾನುಭವಿಗಳ ಕುರಿತು ಚರ್ಚೆ ನಡೆಸಲಾಯಿತು. ಬಿಪಿಎಲ್ ಪಟ್ಟಿಯಲ್ಲಿದ್ದಾಗ ಪಡೆದಿದ್ದ ಸೌಲಭ್ಯಗಳ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ 91 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯನ್ನೂ ಪರಿಶೀಲಿಸಲಾಯಿತು.ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವುದು ಹಾಗೂ ಅಹವಾಲುಗಳಿಗೆ ಶೀಘ್ರ ಸ್ಪಂದಿಸುವ ಮೂಲಕ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.ಇದೇ ವೇಳೆ ಗ್ರಾಮೀಣ ಪ್ರದೇಶಗಳ ಮಹಿಳೆಯರ ಅನುಕೂಲಕ್ಕಾಗಿ 70 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಸಲಾಯಿತು. ಅಗತ್ಯವಿರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಯಿತು.ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.ಸಭೆಯಲ್ಲಿ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಶಿವಣ್ಣ, ಸದಸ್ಯ ಕಾರ್ಯದರ್ಶಿ ಪರಮೇಶ್ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳ್ಳಾರಿಯಲ್ಲಿ ಫುಟ್‌ಪಾತ್‌ಗಳು ಬಾಯಿ ತೆರೆದುಕೊಂಡಿವೆ; ಹುಷಾರು!
ಬೆಳಗಾವಿಯಲ್ಲೂ ಶಾಸಕರ ಭವನ: ಸ್ಪೀಕರ್‌ ಜಿ.ಎಸ್. ಪಾಟೀಲ