ಐತಿಹಾಸಿಕ ಸ್ಮಾರಕ ಮುಂದಿನ ಪೀಳಿಗೆಗೆ ಉಳಿಯಲಿ: ಡಿಸಿ ಸಂಗಪ್ಪ

KannadaprabhaNewsNetwork |  
Published : Dec 20, 2025, 03:00 AM IST
  (ಫೋಟೊ 19ಬಿಕೆಟಿ1, ಜಿಲ್ಲಾಧಿಕಾರಿ ಸಂಗಪ್ಪ  ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರು) | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಬಾದಾಮಿ, ಐಹೊಳೆಯಲ್ಲಿರುವ ಪಾರಂಪರಿಕ ಸ್ಮಾರಕಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಧಿಕಾರದ ಆಯುಕ್ತರು ಹಾಗೂ ಬಾಗಲಕೋಟೆ ಉಪ ವಿಭಾಗಾಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಬಾದಾಮಿ, ಐಹೊಳೆಯಲ್ಲಿರುವ ಪಾರಂಪರಿಕ ಸ್ಮಾರಕಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಧಿಕಾರದ ಆಯುಕ್ತರು ಹಾಗೂ ಬಾಗಲಕೋಟೆ ಉಪ ವಿಭಾಗಾಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದ ಮೇರೆಗೆ ಈಗಾಗಲೇ ಸರ್ವೇ ಕಾರ್ಯ ಮಾಡಿರುವಂತೆ ಬಾದಾಮಿ ಅಗಸ್ತ್ಯ ತೀರ್ಥ ಹೊಂಡದ ಮೇಲಿರುವ ಒಟ್ಟು 96 ಮನೆಗಳು/ಕಟ್ಟಡಗಳು ಹಾಗೂ ಐಹೊಳೆ ಗ್ರಾಮದಲಿರುವ ರಕ್ಷಿತ, ಅರಕ್ಷಿತ ಸ್ಮಾರಕಗಳಲ್ಲಿ ವಾಸವಾಗಿರುವ ಕುಟುಂಬಗಳ 134 ಮನೆಗಳನ್ನು ಸ್ಥಳಾಂತರಿಸಲು ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರದ ಆಯುಕ್ತರು ಹಾಗೂ ಬಾಗಲಕೋಟೆ ಉಪವಿಭಾಗಾಧಿಕಾರಿಗಳು ಶೀಘ್ರ ಅಲ್ಲಿಯ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಆ ಕುಟುಂಬಗಳ ಮನವೊಲಿಸಿ ಕಾನೂನು ಪ್ರಕಾರ ತೆರವುಗೊಳಿಸುವ ಮೂಲಕ ಸ್ಮಾರಕಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಐಹೊಳೆ ಗ್ರಾಮದದಲ್ಲಿರುವ ರಕ್ಷಿತ, ಅರಕ್ಷಿತ ಸ್ಮಾರಕಗಳಲ್ಲಿ ವಾಸವಾಗಿರುವ ಕುಟುಂಬಗಳ ಸ್ಥಳಾಂತರಕ್ಕೆ ಜಮೀನು ಖರೀದಿಸಲು ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ₹3.50 ಕೋಟಿ ಬಿಡುಗಡೆಯಾಗಿದ್ದು, 134 ಮನೆಗಳ ಸ್ಥಳಾಂತರಕ್ಕೆ ಐಹೊಳೆ ಗ್ರಾಮ ವ್ಯಾಪ್ತಿಯಲ್ಲಿ ಒಟ್ಟು 13 ಎಕರೆ 11 ಗುಂಟೆ ಜಮೀನನ್ನು ಪ್ರತಿ ಎಕರೆಗೆ ₹22 ಲಕ್ಷರಂತೆ ನೇರ ಖರೀದಿಸಲಾಗಿದೆ. ಖರೀದಿಯಾಗಿರುವ ಈ ಜಮೀನಿಗೆ ತಂತಿಬೇಲಿ, ನಾಮಫಲಕ ಅಳವಡಿಸಲು ಬಾಗಲಕೋಟೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಅಂದಾಜು ಪಟ್ಟಿ ಸಲ್ಲಿಸಿದ್ದಾರೆ.

ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿರುವ ಪಾರಂಪಾರಿಕ ಸ್ಮಾರಕಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸ ಕಟ್ಟಡಗಳಿಗೆ ಅಧಿಕಾರಿಗಳು ಅನುಮತಿ ನೀಡಬಾರದು. ಸ್ಮಾರಕಗಳ ಹತ್ತಿರ ನೋ ಕನಸ್ಟ್ರಕ್ಸನ್‌ ಜೋನ್ ಎಂದು ಮಾಡಿಕೊಂಡು ಎಲ್ಲ ಕಾರ್ಯಗಳನ್ನು ತ್ವರಿತ ರೀತಿಯಲ್ಲಿ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಬಾಗಲಕೋಟೆ ಉಪವಿಬಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆಯ ಪುರಾತತ್ವ ಅಧೀಕ್ಷಕ ರಮೇಶ ಮೂಲಿಮನಿ ಸೇರಿದಂತೆ ಇತರರು ಇದ್ದರು.

ಬಾದಾಮಿ ಗುಹಾಂತರ ದೇವಾಲಯದ ಬಳಿಯ ಅಗಸ್ತ್ಯತೀರ್ಥ ಹೊಂಡದ ಮೇಲಿರುವ ಮನೆಗಳ ಸ್ಥಳಾಂತರ ಕಾರ್ಯಕ್ಕಾಗಿ ಪ್ರವಾಸೋದ್ಯಮ ಇಲಾಖೆಯವರು ₹1.50 ಕೋಟಿ ಅಂದಾಜು ಮೊತ್ತದಲ್ಲಿ ಬಾದಾಮಿ ನಗರದ ಸರ್ವೇ ನಂ 245/2 ರಲ್ಲಿ 3 ಎಕರೆ ಜಮೀನು ಖರೀದಿಸಿ, ನಿರ್ಮಿತಿ ಕೇಂದ್ರದ ಮೂಲಕ ಅಂದಾಜು ₹1.20 ಕೋಟಿ ವೆಚ್ಚದಲ್ಲಿ ಲೇಔಟ್ ಅಭಿವೃದ್ಧಿಪಡಿಸಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರ ಪುನರ್ವಸತಿ ಕಲ್ಪಿಸುವ ಕಾರ್ಯ ಅನುಷ್ಠಾನಗೊಳಿಸಬೇಕು.

- ಸಂಗಪ್ಪ ಜಿಲ್ಲಾಧಿಕಾರಿಗಳು ಬಾಗಲಕೋಟೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೇರಂಬಾಣೆ: ವಾರ್ಷಿಕ ಕ್ರೀಡಾ ದಿನಾಚರಣೆ
ಬಲಿಜ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ