ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾರ್ಯಕ್ರಮ ನಡೆಯುವ ವೇದಿಕೆ, ಧ್ವಜಾರೋಹಣ ಸ್ಥಳ, ಪಥ ಸಂಚಲನ, ಆಸನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಾವುದೇ ಲೋಪವಿಲ್ಲದೇ ಅಚ್ಚುಕಟ್ಟಾಗಿ ನಡೆಯುವಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಧ್ವನಿವರ್ಧಕ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ವಿವಿಧ ಸಮಿತಿಗಳಿಗೆ ನಿರ್ದೇಶನ ನೀಡಿದರು. ಪರಿಶೀಲನೆ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ, ಡಿವೈಸ್ಪಿ ಪ್ರಭು ಪಾಟೀಲ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.-------
ಸ್ವಾತಂತ್ರ್ಯೋತ್ಸವ ಅಂಗವಾಗಿ ನಾನಾ ಕಾರ್ಯಕ್ರಮ
ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ. ಸಂಜೆ 5.30ಕ್ಕೆ ನವನಗರದ ಕಲಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ ರೂಪಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.