ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ

KannadaprabhaNewsNetwork |  
Published : Sep 14, 2024, 02:00 AM IST
ಆರ್ಟ್13 | Kannada Prabha

ಸಾರಾಂಶ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾರೈಸಿದರು.ಅವರು ಶುಕ್ರವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು.ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು.ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಗಳನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಚಿಕ್ಕನಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುದರ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ- ವಿಚಾರ, ಸಂಸ್ಕೃತಿಯನ್ನು ಮೈಗೊಡಿಸಿಕೊಂಡು ದೇಶದ ಸುಸಂಸ್ಕೃತ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಆರ್ಟಿಸ್ಟ್ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂ ಇವರಿಂದ ಸ್ಪರ್ಧೆ ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪರ್ಯಾಯ ಪುತ್ತಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ