ಕುಪ್ಮಾ ಸಂಘಟನೆಗೆ ಬಲ ತುಂಬುವ ಕೆಲಸವಾಗಲಿ-ಡಾ. ಉಮೇಶಪ್ಪ ಎಚ್‌.

KannadaprabhaNewsNetwork |  
Published : Aug 28, 2024, 01:02 AM IST
೨೭ಎಚ್‌ವಿಆರ್೪ | Kannada Prabha

ಸಾರಾಂಶ

ಪದವಿಪೂರ್ವ ಕಾಲೇಜುಗಳ ಮಟ್ಟದಲ್ಲಿ ಆಡಳಿತ ಮಂಡಳಿಯ ಪಾತ್ರ ಬಹು ಮುಖ್ಯವಾಗಿದೆ. ಎಲ್ಲ ಆಡಳಿತ ಮಂಡಳಿಗಳು ಒಂದೆಡೆ ಸೇರುತ್ತಿರುವುದು ಬಹಳ ಸಂತೋಷಕರ ವಿಷಯ. ಈ ಸಂಘಟನೆಗೆ ಬಲ ತುಂಬುವ ಕೆಲಸ ಆಗಬೇಕು ಎಂದು ಪಿಯುಡಿಡಿ ಡಾ. ಉಮೇಶಪ್ಪ ಎಚ್. ಹೇಳಿದರು.

ಹಾವೇರಿ: ಪದವಿಪೂರ್ವ ಕಾಲೇಜುಗಳ ಮಟ್ಟದಲ್ಲಿ ಆಡಳಿತ ಮಂಡಳಿಯ ಪಾತ್ರ ಬಹು ಮುಖ್ಯವಾಗಿದೆ. ಎಲ್ಲ ಆಡಳಿತ ಮಂಡಳಿಗಳು ಒಂದೆಡೆ ಸೇರುತ್ತಿರುವುದು ಬಹಳ ಸಂತೋಷಕರ ವಿಷಯ. ಈ ಸಂಘಟನೆಗೆ ಬಲ ತುಂಬುವ ಕೆಲಸ ಆಗಬೇಕು ಎಂದು ಪಿಯುಡಿಡಿ ಡಾ. ಉಮೇಶಪ್ಪ ಎಚ್. ಹೇಳಿದರು.

ನಗರದ ಎಂಆರ್‌ಎಂ ಪಿಯು ಕಾಲೇಜಿನಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಕುಪ್ಮಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂಘಟನೆ ಜಿಲ್ಲಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಭಗತ್ ಕಾಲೇಜಿನ ಎಂ.ಬಿ. ಸತೀಶ, ಸಮಾಜ ಒಳ್ಳೆಯ ಸಮಯದಲ್ಲಿ ಖಾಸಗಿ ಕಾಲೇಜುಗಳ ಪರ ಇರುತ್ತದೆ. ಆದರೆ ಯಾವುದೇ ಖಾಸಗಿ ಕಾಲೇಜಿನಲ್ಲಿ ಒಂದು ಸಣ್ಣ ಸಮಸ್ಯೆಯಾದರೆ ಅದನ್ನೇ ದೊಡ್ಡದು ಮಾಡಿ ಎಲ್ಲ ಖಾಸಗಿ ಕಾಲೇಜುಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾದನೀಯ. ಖಾಸಗಿ ಕಾಲೇಜುಗಳು ಎಲ್ಲರಿಗಿಂತ ಹೆಚ್ಚು ಸಮಾಜಮುಖಿ ಕೆಲಸ ಮಾಡುತ್ತಿದ್ದು, ಸಂಖ್ಯೆಯಲ್ಲಿ ಬಹುಪಾಲು ಖಾಸಗಿ ಕಾಲೇಜುಗಳೇ ಇರುವುದರಿಂದ ಮತ್ತು ಹೆಚ್ಚಿನ ಮಕ್ಕಳು ಖಾಸಗಿ ಕಾಲೇಜಿನಲ್ಲೇ ಇರುವುದರಿಂದ ಸರ್ಕಾರ ಹಾಗೂ ಅಧಿಕಾರಿಗಳು ನೀತಿ, ನಿಯಮ ರೂಪಿಸುವಲ್ಲಿ ನಮ್ಮ ವಿಶ್ವಾಸವನ್ನೂ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಒಂದೇ ತಕ್ಕಡಿಯಲ್ಲಿ ತೂಗಬಾರದು ಎಂದು ಹೇಳಿದರು.

ಜಿಲ್ಲಾ ಪಪೂ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಬೆನ್ನೂರ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರದ ಕೊಂಡಿಯಂತೆ ಕಾರ್ಯ ನಿರ್ವಹಿಸಲು ಕುಪ್ಮಾದಂತಹ ಸಂಘಟನೆಯ ಅನಿವಾರ್ಯತೆಯಿದೆ. ಶಿಕ್ಷಣದ ಹೂಡಿಕೆಗೆ ಸಂಬಂಧಿಸಿದ ಬಿಕ್ಕಟ್ಟುಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಜಂಟಿ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ರವಿಕುಮಾರ ಪೂಜಾರ, ಖಾಸಗಿ ವಿದ್ಯಾಸಂಸ್ಥೆಗಳು ಸಮರ್ಥವಾಗಿ ಕಾರ್ಯ ನಿಭಾಯಿಸುತ್ತಿವೆ. ಈ ವಿಚಾರದಲ್ಲಿ ಸರ್ಕಾರ ಇವರಿಗೆ ಋಣಿಯಾಗಿರಬೇಕು ಎಂದರು.

ಕುಪ್ಮಾದ ರಾಜ್ಯ ಸಮಿತಿಯ ಉಪಾಧ್ಯಕ್ಷ ಡಾ. ಮಂಜುನಾಥ ರೇವಣಕರ ಮಾತನಾಡಿ, ಕುಪ್ಮಾ ಸಂಘಟನೆ ಯಾವುದೇ ಸಂಘರ್ಷಕ್ಕಾಗಿ ಮಾಡಿದ್ದಲ್ಲ. ಇದು ಕೇವಲ ಸರ್ಕಾರದೊಂದಿಗೆ ಸಹಮತವನ್ನು ಬಯಸುತ್ತಿದ್ದು, ಎಲ್ಲರೂ ಕೂಡಿ ಹೋಗುವ ಕೆಲಸವಾಗಬೇಕು. ಸರ್ಕಾರ ಕೂಡ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಮುಂದಿಟ್ಟುಕೊಂಡು ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಅತ್ಯುತ್ತಮ ವಿಚಾರಗಳನ್ನು ಅಳವಡಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರದೊಂದಿಗೆ ವಿಚಾರ ವಿನಿಮಯ ಮಾಡಿಕೊಂಡು ಕೆಲಸ ಮಾಡಲು ಸಂಘಟನೆ ಎಲ್ಲ ರೀತಿಯ ಸಹಕಾರಕ್ಕೆ ಸಿದ್ಧವಿದೆ ಎಂದರು.ಇದೇ ಸಂದರ್ಭದಲ್ಲಿ ಕುಪ್ಮಾ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶ್ರಾವಣ ಕುಲಕರ್ಣಿ ನಿರೂಪಿಸಿದರು. ಪ್ರಕಾಶ ನಾಯಕ್ ಸ್ವಾಗತಿಸಿದರು. ಕಲ್ಯಾಣಕುಮಾರ ಶೆಟ್ಟರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ