ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಯಾಗಲಿ: ಸಂಸದ ತುಕಾರಾಂ

KannadaprabhaNewsNetwork |  
Published : Oct 15, 2025, 02:08 AM IST
ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ-ಒಂದು ಉತ್ಪನ್ನಯೋಜನೆಯಡಿ ಸ್ವಸಹಾಯ ಸಂಘದ ಉತ್ಪನ್ನ ಮಾರಾಟ ಮಳಿಗೆಯನ್ನು ಸಂಸದ ಈ.ತುಕಾರಾಂ ಸೋಮವಾರ ಉದ್ಘಾಟಿಸಿದರು.  | Kannada Prabha

ಸಾರಾಂಶ

ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು.ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು.

ಬಳ್ಳಾರಿ: ಕೇಂದ್ರ ಸರ್ಕಾರದ ಒಂದು ನಿಲ್ದಾಣ- ಒಂದು ಉತ್ಪನ್ನ ಯೋಜನೆಯಿಂದ ಸ್ವಸಹಾಯ ಸಂಘಗಳಿಗೆ ಅನುಕೂಲವಾಗಲಿದೆ. ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ ಎಂದು ಸಂಸದ ಈ. ತುಕಾರಾಮ್ ಹೇಳಿದರು.

ನಗರದ ರೈಲು ನಿಲ್ದಾಣದಲ್ಲಿ ಸೋಮವಾರ "ಒಂದು ನಿಲ್ದಾಣ-ಒಂದು ಉತ್ಪನ್ನ " ಯೋಜನೆಯಡಿ ಎನ್‌ಆರ್‌ಎಲ್‌ಎಂ ಸ್ವ-ಸಹಾಯ ಸಂಘದ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ಸ್ಥಳೀಯ ಉತ್ಪನ್ನಗಳನ್ನು ಜನಪ್ರಿಯಗೊಳಿಸಲು ಅನುಕೂಲವಾಗಲಿದೆ. ಸ್ಥಳೀಯ ಉತ್ಪನ್ನಗಳ ಆಹಾರ ಪದಾರ್ಥಗಳಿಗೆ ಮಾರುಕಟ್ಟೆ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದ ಸ್ವ ಸಹಾಯ ಸಂಘಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ.

ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು.ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಬಳಿಕ ಜಿಪಂ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದರು, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾನೂನಿನಾತ್ಮಕವಾಗಿ ಬಗೆಹರಿಸಬಹುದಾದವುಗಳನ್ನು ಕಾಲಮಿತಿಯಲ್ಲಿ ಬಗೆಹರಿಸಬೇಕು. ಉಳಿದವುಗಳನ್ನು ಸಂಸದರ ಗಮನಕ್ಕೆ ತರಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.

ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಎನ್.ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಪಂ ಮಾಜಿ ಸದಸ್ಯರು, ರೈಲ್ವೆ ಅಧಿಕಾರಿಗಳು, ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು
ಪರಂ ಸಿಎಂ ಆಗಲಿ : 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ