ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಲಿ

KannadaprabhaNewsNetwork |  
Published : Jul 15, 2026, 01:15 AM IST
ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ  ಪತ್ರಿಕಾ ದಿನಾಚರಣೆ ಹಾಗೂ ಉದ್ಯಾನವನ ದತ್ತು ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್  | Kannada Prabha

ಸಾರಾಂಶ

ಮಾಧ್ಯಮಗಳು ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಕೆಲಸ ಮಾಡಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶಾಸಕ ಎಸ್ ಆರ್. ಶ್ರೀನಿವಾಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಮಾಧ್ಯಮಗಳು ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಕೆಲಸ ಮಾಡಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶಾಸಕ ಎಸ್ ಆರ್. ಶ್ರೀನಿವಾಸ್ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಉದ್ಯಾನವನ ದತ್ತು ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಅರ್ಹ ಪತ್ರಕರ್ತರಿಗೆ ಸರ್ಕಾರಿ ಬಸ್ ನಲ್ಲಿ ಸಂಚರಿಸಲು ಉಚಿತ ವ್ಯವಸ್ಥೆ ಮಾಡಲು ಅನುಮೋದನೆ ನೀಡಲಾಗಿದೆ. ಇನ್ನೂ ಆರೋಗ್ಯ ಜೀವ ವಿಮೆ, ಸೇರಿದಂತೆ ಹಲವು ಯೋಜನೆಗಳನ್ನು ನೀಡಲು ಬದ್ಧವಾಗಿದ್ದೇವೆ. ಗುಬ್ಬಿ ತಾಲೂಕಿನ ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಿಸಲು ಸಿಎ ನಿವೇಶನ ನೀಡಲು ಈಗಾಗಲೇ ಹೇಳಿದ್ದೇನೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯತೀಶ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಗಳ ಮಹತ್ವ ದೊಡ್ಡದ್ದು, ಸಮಾಜದ ಅಂಕು ಡೊಂಕುಗಳನ್ನು ನಿರ್ಭೀತಿಯಿಂದ ಬರೆಯುತ್ತವೆ. ಪ್ರತಿಯೊಬ್ಬರು ಮನೆಗೆ ದಿನಪತ್ರಿಕೆಗೆಳನ್ನು ಹಾಕಿಸಿಕೊಳ್ಳಬೇಕು, ಪತ್ರಿಕೆಗಳನ್ನು ಓದುವುದರಿಂದ ಭಾಷೆಯ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ‌ ಎಂದು ತಿಳಿಸಿದರು.ವೃತ್ತ ನೀರಿಕ್ಷಕ ರಾಘವೇಂದ್ರ ಮಾತನಾಡಿ ಪೊಲೀಸರು ಹಾಗೂ ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ. ಇಬ್ಬರು ಒತ್ತಡದ ನಡುವೆ ಕೆಲಸ ಮಾಡುತ್ತಾರೆ ಪತ್ರಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸತ್ಯ, ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯುತ ಸುದ್ದಿಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಹೇಳಿದರುಪಿಎಸ್ಐ ರಾಜೇಶ್ವರಿ ಮಾತನಾಡಿ, ಇಂದಿನ ಯುವ ಸಮುದಾಯಕ್ಕೆ ಅದರಲ್ಲೂ ಯುವತಿಯರಿಗೆ ಕಾನೂನಿನ ಅರಿವಿರಬೇಕು. ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ, ಇವುಗಳ ಬಗ್ಗೆ ಹೆಚ್ಚಿನ ಅರಿವು ಇರಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.ಪ್ರಾಂಶುಪಾಲ ಮಂಜುನಾಥ್ ಮಾತನಾಡಿ ಸ್ವಾತಂತ್ರ್ಯ ಹೋರಾಟವನ್ನು ದೇಶಕ್ಕೆ ತಿಳಿಸಲು ದಿನಪತ್ರಿಕೆಗಳು ಹೊರ ತೆರೆಯಲಾಯಿತು. ‌ಪರ್ತಕರ್ತರು ಎಐ, ಚಾಟ್ ಜಿಪಿಟಿ, ಜಿಮಿನಿಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ತಮ್ಮ ಸಂದೇಶವನ್ನು ಪತ್ರಿಕೆಯಲ್ಲಿ ಹಾಕಬಹುದು ಎಂದರು.ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿ, ತಾಲೂಕಿನಲ್ಲಿ ಶಾಸಕರು ಪತ್ರಕರ್ತರಿಗೆ ಈಗಾಗಲೇ ಕಚೇರಿ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಮುಂದಿನ ದಿನದಲ್ಲಿ ಆರೋಗ್ಯ ವಿಮೆ ಮಾಡಿಸಿಕೊಟ್ಟರೆ ಎಲ್ಲಾ ಪತ್ರಕರ್ತರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಜಿ ಆರ್. ಶಿವಕುಮಾರ್, ನರಸಿಂಹಮೂರ್ತಿ, ಎಚ್. ಡಿ ಎಲ್ಲಪ್ಪ,‌ ನಟರಾಜು, ಅಡವಿಶಯ್ಯ, ಪತ್ರಕರ್ತ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಮಳೆಕಲ್ಲಹಳ್ಳಿ ಯೋಗೀಶ್, ಸಂಜಯ್.ಕೆ, ಕೆಂಪರಾಜು, ಮೋಹನ್ ಕೋಟೆ, ಆನಂದ್ ದೀಕ್ಷಿತ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾವಗಡದಲ್ಲಿ ಕೋವಿಡ್ ಮುಂಜಾಗ್ರತೆಗೆ ಡಿಸಿ ಸೂಚನೆ
ಕುರಿ ಮಾಲೀಕನಿಗೆ ಪರಿಹಾರ ಮಂಜೂರಾತಿ ಆದೇಶ ಪತ್ರ