ವೈದ್ಯಕೀಯ ವ್ಯವಸ್ಥೆ ಸನ್ನದ್ಧ ಸ್ಥಿತಿಯಲ್ಲಿರಲಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 26, 2025, 01:01 AM IST
ಜಿಲ್ಲಾಧಿಕಾರಿ ಸಭೆ ನಡೆಸಿದರು  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಗಾಗಿ ವೈದ್ಯಕೀಯ ಸೇವೆ, ಔಷಧಗಳು, ವೈದ್ಯಕೀಯ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ತಕ್ಷಣದಲ್ಲಿ ಲಭ್ಯವಿರುವಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ವ್ಯವಸ್ಥೆ ಮಾಡಿಕೊಳ್ಳಬೇಕು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಲಕ್ಷ್ಮೀಪ್ರಿಯಾ

ಕನ್ನಡಪ್ರಭ ವಾರ್ತೆ ಕಾರವಾರಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಗಾಗಿ ವೈದ್ಯಕೀಯ ಸೇವೆ, ಔಷಧಗಳು, ವೈದ್ಯಕೀಯ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ತಕ್ಷಣದಲ್ಲಿ ಲಭ್ಯವಿರುವಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ವ್ಯವಸ್ಥೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಪತ್ತು ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಗಾಗಿ ತುರ್ತಾಗಿ ಸ್ಪಂದಿಸಬೇಕಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಗಳು ಸಂಪೂರ್ಣವಾಗಿ ಸನ್ನದ್ದವಾಗಿರುವುದು ಅಗತ್ಯವಿದ್ದು, ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಕಾಲೇಜು ಮತ್ತು ಖಾಸಗಿ ನರ್ಸಿಂಗ್ ಹೋಂಗಳಲ್ಲಿರುವ ವೈದ್ಯಕೀಯ ಉಪಕರಣಗಳು, ಔಷಧಗಳ ದಾಸ್ತಾನು, ವೈದ್ಯರು ಮತ್ತು ಸಿಬ್ಬಂದಿ ವಿವರಗಳನ್ನು ಕ್ರೋಡೀಕರಿಸುವಂತೆ ಮತ್ತು ಆಗಾಗ್ಗೆ ಇದನ್ನು ಪರಿಶೀಲನೆ ಮಾಡುವುದರ ಮೂಲಕ ತುರ್ತು ಸಂದರ್ಭದಲ್ಲಿ ಯಾವುದೇ ವೈದ್ಯಕೀಯ ವ್ಯತ್ಯಯ ಆಗದಂತೆ ಎಚ್ಚರ ವಹಿಸಬೇಕು ಎಂದರು.

ತುರ್ತು ಸಂದರ್ಭದಲ್ಲಿ ಜಿಲ್ಲೆಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ವೈದ್ಯಕೀಯ ಸೇವೆಗಳನ್ನು ಸಾಗಿಸಲು ಅಗತ್ಯವಿರುವ ವಾಹನಗಳು ಮತ್ತು ಸಮೀಪದ ರಸ್ತೆ ಮಾರ್ಗವನ್ನು ಗುರುತು ಮಾಡಿಟ್ಟುಕೊಳ್ಳಬೇಕು, ವೈದ್ಯಕೀಯ ಉಪಕರಣಗಳು ಮತ್ತು ಔಷಧಗಳ ಕೊರತೆಯಿದ್ದಲ್ಲಿ ಈಗಿನಿಂದಲೇ ಅಗತ್ಯ ಪ್ರಮಾಣದಲ್ಲಿ ಖರೀದಿ ಮಾಡಿ, ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಮತ್ತು ದಾಸ್ತಾನು ಪಟ್ಟಿಯನ್ನು ಸಿದ್ದಪಡಿಸಿ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಕೊಳ್ಳುವ ಎಲ್ಲಾ ಇಲಾಖೆಗಳು ತಮ್ಮಲ್ಲಿರುವ ರಕ್ಷಣಾ ಉಪಕರಣಗಳ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಂಗೆ ನೀಡುವಂತೆ ಮತ್ತು ಈ ಎಲ್ಲಾ ಉಪಕರಣಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆಗಾಗ್ಗೆ ಪರಿಶೀಲನೆ ನಡೆಸಬೇಕು, ಉಪಕರಣಗಳು ಹಳೆಯದಾಗಿದ್ದರೆ ಆಧುನಿಕ ಉಪಕರಣಗಳ ಖರೀದಿಸುವಂತೆ ನಿರ್ದೇಶನ ನೀಡಿದರು.ರಾಜ್ಯ ಜೈವಿಕ ವಿಪತ್ತು ತಾಂತ್ರಿಕ ಸಲಹ ಸಮಿತಿಯ ಸದಸ್ಯ ಪ್ರದೀಪ್, ಜಿಲ್ಲೆಯಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಅಗತ್ಯವಿರುವ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸುವ ಬಗ್ಗೆ ಸಂಪೂರ್ಣ ವಿವರ ಸಿದ್ದಪಡಿಸಿಕೊಳ್ಳಬೇಕು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಇಲಾಖೆಗಳ ಎಲ್ಲಾ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಬೇಕು, ಯಾವುದೇ ಸಂದರ್ಭದಲ್ಲಿ ಎಲ್ಲಾ ಅಗತ್ಯ ಸೇವೆ ಲಭ್ಯವಿರುವಂತೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ತರಬೇತಿ ಇತರ ಐಎಎಸ್ ಅಧಿಕಾರಿ ಝೂಫಿಶನ್ ಹಕ್, ಅಪರ ಜಿಲ್ಲಾಧಿಕಾರಿ ಸಜೀದ್ ಮುಲ್ಲಾ ಇದ್ದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ