ಮೇಲ್ ಗಂಗೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಮತ್ತು ಸಂಜೀವ ಪಾರ್ವತಿ ಪ್ರಕಾಶನಗಳ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಗಂಗೊಳ್ಳಿ
ಸೈನಿಕರು ನಮ್ಮ ಜೀವನದ ಉಸಿರಿನಂತೆ. ನಮ್ಮ ಸುಂದರ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ವೀರ ಯೋಧರನ್ನು ನಮ್ಮ ನಿತ್ಯ ಜೀವನದಲ್ಲಿ ಸದಾ ಸ್ಮರಿಸುತ್ತಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.ಅವರು ಇಲ್ಲಿನ ಮೇಲ್ ಗಂಗೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಮತ್ತು ಸಂಜೀವ ಪಾರ್ವತಿ ಪ್ರಕಾಶನಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರಾಜೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಸದಸ್ಯ ಚಂದ್ರ ಖಾರ್ವಿ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ, ಅರ್ಚನಾ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಆನಂದ, ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ, ಅಂಗನವಾಡಿ ಕಾರ್ಯಕರ್ತೆ ಸಹನಾ, ಪೋಷಕರಾದ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನುಡಿ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಹೊಸ ವಿದ್ಯಾರ್ಥಿಗಳನ್ನು ಸಿಂಧೂರ ತಿಲಕವಿಟ್ಟು ಸ್ವಾಗತಿಸಲಾಯಿತು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ ಆಚಾರ್ಯ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು. ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.