ಕನ್ನಡಪ್ರಭ ವಾರ್ತೆ ಸಾಗರ ಬರದ ಪರಿಸ್ಥಿತಿಯಲ್ಲಿ ಕೂಲಿಯೂ ದೊರೆಯುತ್ತಿಲ್ಲ, ಕೆಲಸವೂ ಇಲ್ಲದ ಸ್ಥಿತಿ ಇದ್ದು, ನರೇಗಾ ಯೋಜನೆ ಮೂಲಕ ಉದ್ಯೋಗ ಕಲ್ಪಿಸುವತ್ತ ಗಮನಹರಿಸಬೇಕಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿಕೊಡಿ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದ ಅವರು, ಕೆಲವೆಡೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪಡವಗೋಡು ಗ್ರಾಪಂನ ಕೆಲವು ಗ್ರಾಮಗಳಲ್ಲಿ 3 ತಿಂಗಳಿನಿಂದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.
ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಉಪ ಕಾರ್ಯದರ್ಶಿ ಸುಜಾತ, ತಹಸೀಲ್ದಾರ್ ಚಂದ್ರಶೇಖರ್, ಕಾರ್ಯನಿರ್ವಾಹಣಾಧಿಕಾರಿ ನಾಗೇಶ್ ಬ್ಯಾಲದ್ ಇನ್ನಿತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.- - - ಬಾಕ್ಸ್ ಪತ್ರಕರ್ತರಿಗೆ ಧಮ್ಕಿ ಹಾಕಿದ ಸಚಿವ
ಮುಂದುವರಿದು ಮಾತನಾಡಿದ ಸಚಿವರು, ನಿಮ್ಮ ಬಳಿ ಬೇರೆ ಪ್ರಶ್ನೆ ಇಲ್ಲವೇ? ನೀವು ತಿಪ್ಪರಲಾಗ ಹಾಕಿದರೂ ಈ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ ಎಂದು ಧಮ್ಕಿ ರೀತಿಯಲ್ಲಿ ಪತ್ರಕರ್ತರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದು ಕಂಡುಬಂದಿತು.