-ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ
ಕನ್ನಡಪ್ರಭ ವಾರ್ತೆ ಯಾದಗಿರಿ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗದ ಮಕ್ಕಳು ಮುಖ್ಯವಾಹಿನಿಗೆ ಬರಬೇಕು, ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಹೇಳಿದರು.ಪ.ಪ ಜಾತಿ ಮತ್ತು ಪ.ಪಂ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಹಾಗೂ ಸಭೆ ಮತ್ತು ಅಧಿಕಾರಿಗಳೊಂದಿಗೆ ನಿಗಮದ ವಿವಿಧ ಯೋಜನೆಗಳಡಿ ಕಲ್ಪಿಸಿದ ಸೌಲಭ್ಯಗಳ ಕುರಿತು ಸೋಮವಾರ ಜಿ.ಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ನೈಜ ಜಾತಿ ಪ್ರಮಾಣ ಪತ್ರ: ಮೂಲಜನಾಂಗದವರಿಗೆ ನೈಜ ಜಾತಿ ಪ್ರಮಾಣ ಪತ್ರ, ವಸತಿ ರಹಿತರಿಗೆ ವಸತಿ ಸೌಲಭ್ಯ, ನಿವೇಶನ ರಹಿತರಿಗೆ ನಿವೇಶನ ಸೌಲಭ್ಯ, ಸಮುದಾಯ ಭವನ ಶೌಚಾಲಯ ನಿರ್ಮಾಣ, ಸುಸಜ್ಜಿತ ಶಾಲಾ ಕಟ್ಟಡಗಳ ವ್ಯವಸ್ಥೆ, ಆಟದ ಮೈದಾನ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿ. ಪಲ್ಲವಿ ಸೂಚಿಸಿದರು.
ಅರ್ಹ ಫಲಾನುಭವಿಗಳ ಆಯ್ಕೆ: ಅಧಿಕಾರಿಗಳು ಮತ್ತು ನಾಮ ನಿರ್ದೇಶಿತ ಸದಸ್ಯರ ಮಧ್ಯ ಸಮನ್ವಯತೆ ಇರಬೇಕು. ಈ ಸಮುದಾಯಕ್ಕೆ ಸರ್ಕಾರದ ಯೋಜನೆಗಳಡಿ ಸೌಲಭ್ಯ ದೊರಕಿಸಬೇಕೆಂಬ ಉದ್ದೇಶದೊಂದಿಗೆ ಜಿಲ್ಲಾ ಮಟ್ಟದಲ್ಲಿ ಜಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿ ಇದ್ದು, ಪ್ರತಿ ತ್ರೈಮಾಸಿಕ ಅವಧಿಯಲ್ಲಿ ಸಭೆ ನಡೆಸಿ ಯೋಜನೆಗಳ ಲಾಭ ದೊರಕಿಸಲು ಮತ್ತು ಅರ್ಹ ಫಲಾನುಭವಿಗಳ ಆಯ್ಕೆಗೆ ನೆರವಾಗುವಂತೆ ಅವರು ಸಲಹೆ ನೀಡಿದರು.
ಈಗಾಗಲೇ 20 ಜಿಲ್ಲೆಗಳಲ್ಲಿ ಈ ರೀತಿಯ ಕುಂದುಕೊರತೆ ಅಹವಾಲು ಸ್ವೀಕರಿಸಿ, ಯಾದಗಿರಿಯಲ್ಲೂ ಸ್ವೀಕರಿಸಿದ್ದು, ಸರ್ಕಾರದ ಗಮನಕ್ಕೆ ತರುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
===ಬಾಕ್ಸ್:1===
===ಬಾಕ್ಸ್:2===
---
10ವೈಡಿಆರ್7: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಹಾಗೂ ಸಭೆ ಮತ್ತು ಅಧಿಕಾರಿಗಳೊಂದಿಗೆ ನಿಗಮದ ವಿವಿಧ ಯೋಜನೆಗಳಡಿ ಕಲ್ಪಿಸಿದ ಸೌಲಭ್ಯಗಳ ಕುರಿತು ಯಾದಗಿರಿ ಜಿ.ಪಂ ಸಭಾಂಗಣದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.