ಹೊನ್ನಾವರ: ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.
ಮಾಜಿ ಶಾಸಕ ಸುನೀಲ್ ನಾಯ್ಕ ಮಾತನಾಡಿ, ಸರ್ಕಾರ ಇಲ್ಲದಿದ್ದರೂ ಕಾರ್ಯಕರ್ತರು ಗೆಲುವಿಗೆ ಶ್ರಮ ಪಟ್ಟಿದ್ದಾರೆ. ಅವರಿಗೆ ತೊಂದರೆ ಆದಾಗ ರಕ್ಷಣೆ ಅಗತ್ಯ. ನಮ್ಮ ಸರ್ಕಾರದ ಅಧಿಕಾರದಿಲ್ಲದಿರುವುದರಿಂದ ನಮ್ಮ ಕಾರ್ಯಕರ್ತರ ಮೇಲೆ ಇಲ್ಲಿನ ಸಚಿವರು ಸುಳ್ಳು ದೂರು ದಾಖಲಿಸುವ ಕೆಲಸ ಮಾಡಿದ್ದಾರೆ. ಮನೆಯಲ್ಲಿರುವ ಮಹಿಳೆಯ ಮೇಲೂ ಕೇಸ್ ದಾಖಲಿಸುವ ಕೆಲಸ ಆಗಿದೆ. ಕಳೆದೊಂದು ವರ್ಷದಿಂದ ನಿರಂತರ ಇಂತಹ ಪ್ರಕರಣ ನಡೆಯುತ್ತಿದೆ. ಸೂಕ್ಷ್ಮತೆಯಿಂದ ಗಮನಿಸಿ ಮುಂದಿನ ಬಾರಿ ಬರುವುದು ನಾವೇ ಗೆಲ್ಲುವುದು ಶತಸಿದ್ಧ. ಆಗ ಕರ್ಮ ರಿಟರ್ನ್ ಆಗುತ್ತದೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ಮಾಜಿ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಬಿಜೆಪಿಗೆ ಕಾರ್ಯಕರ್ತರೆ ಆಸ್ತಿ. ಅವರ ಪರಿಶ್ರಮ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ, ಅಭಿವೃದ್ಧಿ ಕಾರ್ಯಕ್ರಮಗಳು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದೆ. ನಮ್ಮನ್ನು ಗೆಲ್ಲಿಸಲು ಶ್ರಮಿಸುವ ಕಾರ್ಯಕರ್ತರನ್ನು ಎಂದು ಕೈಬಿಡಬಾರದು. ಅವರನ್ನು ರಕ್ಷಣೆ ಮಾಡುವುದು ನಮ್ಮ ಹೊಣೆ ಎಂದರು.ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ, ಮಾಜಿ ಶಾಸಕ ಶಿವಾನಂದ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಮಾತನಾಡಿದರು.
ಬಿಜೆಪಿ ಮಂಡಲಾಧ್ಯಕ್ಷ ಮಂಜುನಾಥ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಪತಿ ಗೌಡ ನಿರ್ವಹಿಸದರು. ಯೋಗೇಶ್ ಮೇಸ್ತ ವಂದಿಸಿದರು.