ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ: ಚಂದ್ರಶೇಖರ್ ಗಾಳಿ

KannadaprabhaNewsNetwork |  
Published : Nov 15, 2026, 02:15 AM IST
ಕರಡೋಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ನವಲಿ ಹೋಬಳಿಯ ಕರಡೋಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಆಂದೋಲನ ಸಭೆ ನಡೆಯಿತು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನವಲಿ: ನವಲಿ ಹೋಬಳಿಯ ಕರಡೋಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಆಂದೋಲನ ಸಭೆ ನಡೆಯಿತು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತಾಲೂಕು ದಂಡಾಧಿಕಾರಿ ಚಂದ್ರಶೇಖರ್ ಗಾಳಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯಬೇಕು ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ಸೂಕ್ತವಾಗಿ ಸ್ಪಂದಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಗ್ರಾಮಸ್ಥರು ಸಭೆಯ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹಾದೇವಪ್ಪ ಹಂಚಿನಾಳ, ಸಿಡಿಪಿಒ ವಿಜಯಲಕ್ಷ್ಮಿ ಹಿರೇಮಠ, ಅರಣ್ಯ ಇಲಾಖೆ ಅಧಿಕಾರಿ ಬಸವರಾಜ ಪೂಜಾರಿ, ಎಪಿಎಂಸಿ ಕಾರ್ಯದರ್ಶಿ ಸಾವಿತ್ರಿ ಪಾಟೀಲ್, ಆರೋಗ್ಯ ಇಲಾಖೆ ಅಧಿಕಾರಿ ಡಾ. ಗೌರಿಶಂಕರ್, ನೋಂದಣಿ ಇಲಾಖೆ ಎಸ್‌ಡಿಎ ಶ್ರೀಶೈಲಾ, ಪೊಲೀಸ್ ಇಲಾಖೆಯ ಎಎಸ್‌ಐ ರಾಮಪ್ಪ ಉಪಸ್ಥಿತರಿದ್ದರು.ಪ್ರಜಾಸೇವಾ ಆಂದೋಲನ: 132 ಅರ್ಜಿ ಸಲ್ಲಿಕೆ: ಕರಡೋಣಿ ಗ್ರಾಮದಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 132 ಅರ್ಜಿಗಳು ಸಲ್ಲಿಕೆಯಾಗಿವೆ. ಪಂಚಾಯತ್ ರಾಜ್ ಇಲಾಖೆ – 78, ಕಂದಾಯ ಇಲಾಖೆ – 27, ಆರ್‌ಡಿಪಿಆರ್ ಇಲಾಖೆ – 7, ಜೆಸ್ಕಾಂ – 6, ಶಿಕ್ಷಣ ಇಲಾಖೆ – 5, ಸಾರಿಗೆ ಇಲಾಖೆ – 3, ಸಮಾಜ ಕಲ್ಯಾಣ ಇಲಾಖೆ – 2, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 2, ಅಬಕಾರಿ ಇಲಾಖೆ – 1, ಅರಣ್ಯ ಇಲಾಖೆ – 1, ಕೃಷಿ ಇಲಾಖೆ – 1, ಪಶುಸಂಗೋಪನೆ ಇಲಾಖೆ – 1, ಕಾರ್ಮಿಕ ಇಲಾಖೆ – 1, ಆಹಾರ ಇಲಾಖೆ – 1, ಗಣಿ ಮತ್ತು ಭೂ ವಿಜ್ಞಾನ ಇಲಾಖೆ – 1

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ