ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಲಿ

KannadaprabhaNewsNetwork |  
Published : Jul 12, 2025, 12:32 AM IST
ವಿಜಯಪುರ ಜಿ.ಪಂ. ಸಭಾಂಗಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿಯಂತಹ ಅನೇಕ ಯೋಜನೆಗಳ ಪೂರಕ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿಯಂತಹ ಅನೇಕ ಯೋಜನೆಗಳ ಪೂರಕ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ ಆಯೋಗದ ಅಧ್ಯಕ್ಷರನ್ನು ಮಾಡಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ. ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ವರದಿ ಪೂರಕವಾಗಿರಲಿ ಎಂದರು.

ಸರ್ಕಾರದ ಯೋಜನೆಗಳ ಲಾಭ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತಾಗಲು ಅಧಿಕಾರಿಗಳು ಬದ್ದತೆಯಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯ ವಲಯಕ್ಕೆ ಮತ್ತುಷ್ಟು ಆದ್ಯತೆ ಸೇರಿದಂತೆ ಶಿಕ್ಷಣ ಹಾಗೂ ಆರೊಗ್ಯ ಕ್ಷೇತ್ರಗಳ ಮೂಲಭೂತ ಸೌಲಭ್ಯ ಕಲ್ಪಿಸಲು ಸಮಿತಿ ಶಿಪಾರಸ್ಸು ಮಾಡಲು ತಿಳಿಸಿದರು. ಜಿಲ್ಲೆಯ ಪ್ರವಾಸಿ ತಾಣಗಳ ಬೆಳವಣಿಗೆಗೆ, ಕೃಷಿ ಕ್ಷೇತ್ರ, ಯುವಕರಿಗೆ ಉದ್ಯೋಗ, ಕುಡಿಯುವ ನೀರು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ದಿ ದೃಷ್ಠಿಕೋನ ಇಟ್ಟುಕೊಂಡು ಸಮಿತಿ ವರದಿ ನೀಡಬೇಕು. ಜಿಲ್ಲೆಯ ಅಭಿವೃದ್ದಿಗಾಗಿ ಅಧಿಕಾರಿಗಳು ಶ್ರಮಿಸುವಂತೆ ತಿಳಿಸಿದರು.

ಸಮಿತಿಯ ಸದಸ್ಯ ಡಾ.ಎಸ್.ಟಿ.ಬಾಗಲಕೋಟೆ ಮಾತನಾಡಿ, ಶಿಕ್ಷಣ, ಆರೋಗ್ಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ ವಲಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಂಡಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ. ವಿಜಯಪುರ ಜಿಲ್ಲೆ ಒಳಗೊಂಡಂತೆ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಿತಿ ಅಧ್ಯಯ ಪೂರ್ಣಗೊಂಡಿದೆ. ಡಾ.ಡಿ.ಎಂ.ನಂಜುಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ದಿ ಮತ್ತು ಬದಲಾವಣೆಯ ವಿಷಯಗಳ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗಾಗಿ ಅಗತ್ಯ ಇರುವ ಅಂಶಗಳ ಸಂಗ್ರಹಿಸಿ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ತೋಟಗಾರಿಕೆ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆಗಳ ಅಗತ್ಯ ಮಾಹಿತಿ ಪಡೆದುಕೊಂಡರು. ನಗರದ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕಾಗಿ ಮಹಿಳಾ ವಿವಿಯ ರಜಿಸ್ಟಾರ್‌ ಶಂಕರಗೌಡ ಸೋಮನಾಳ ಅವರ ಕೋರಿಕೆಗೆ ಸಕಾರತ್ಮಕವಾಗಿ ಸ್ಪಂದಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ಹಾಗೂ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಈ ಅಗತ್ಯತೆಯನ್ನು ಸಮಿತಿ ಗಮನಿಸಿದೆ ಎಂದು ಹೇಳಿದರು.ಸದಸ್ಯೆ ಸಂಗೀತಾ.ಎನ್.ಕೆ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಪಂ ಉಪ ಕಾರ್ಯದರ್ಶಿ ವಿಜಯ ಆಜೂರ ಮುಂತಾದವರು ಇದ್ದರು.ಕೋಟ್‌ವಿಜಯಪುರ ಜಿಲ್ಲೆ ಕೃಷಿ ಅವಲಂಬಿತ ಜಿಲ್ಲೆಯಾಗಿದ್ದು, ಕೃಷಿ ಸಂಸ್ಕರಣೆ, ಸೇವಾ ವಲಯದಲ್ಲಿ ಕೌಶ್ಯಲಾಭಿವೃದ್ದಿಗೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದರ ಜೊತೆಗೆ ಜಿಲ್ಲೆಯಲ್ಲಿ ಮುಖ್ಯವಾಗಿರುವ ಪ್ರವಾಸೋದ್ಯಮ ಬೆಳವಣಿಗೆ ಹಾಗೂ ಸೇವಾ ವಲಯ ವ್ಯವಸ್ಥಿತವಾಗಿ ಕೊಡಬಹುದು ಎಂಬುದರ ಬಗ್ಗೆ ತಿಳಿಸಿದೆ. ಈ ಸಮಿತಿಯು ಕಳೆದ ಮೂರು ತಿಂಗಳಿಂದ ರಾಜ್ಯದ ಎಲ್ಲ ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ.ಡಾ.ವಿಶಾಲ್.ಆರ್, ಸಮಿತಿಯ ಸದಸ್ಯ ಕಾರ್ಯದರ್ಶಿ

PREV