ಕನ್ನಡಪ್ರಭವಾರ್ತೆ ತಿಪಟೂರು
ಪ್ರೊ.ಜೆ.ಆರ್. ಮಹಾಲಿಂಗಯ್ಯನವರ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಗರದ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಜನರಿಗೆ ಮುಂದಿನ ೧೦೦ ವರ್ಷಗಳ ತಲೆಮಾರಿಗೆ ಇವರ ಆದರ್ಶಗಳು, ಶೈಕ್ಷಣಿಕ ಸಾಧನೆಗಳು ತಲುಪಲು ಕಾರ್ಯಕ್ರಮಗಳ ಆಯೋಜನೆ ಮಾಡಬೇಕು. ಅದಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಮಾರ್ಗದರ್ಶನವನ್ನು ನೀಡಲು ನಾನು ಸದಾಸಿದ್ಧ ಎಂದು ತಿಳಿಸಿದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮತ್ತು ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಕೆ.ಆರ್. ಬಸವರಾಜು ಮಾತನಾಡಿ, ಕಲ್ಪತರು ಕಾಲೇಜಿನ ಬೆಳವಣಿಗೆಯಲ್ಲಿ ಸಂಸ್ಥಾಪಕ ಪ್ರಾಂಶುಪಾಲರಾಗಿ ಪ್ರೊ. ಜೆ.ಆರ್. ಮಹಾಲಿಂಗಯ್ಯನವರು ವಹಿಸಿದ ಪಾತ್ರವನ್ನು ಸ್ಮರಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದರು.ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶಿವರಾಜು ಮಾತನಾಡುತ್ತ, ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಪ್ರೊ. ಜೆ.ಆರ್. ಮಹಾಲಿಂಗಯ್ಯನವರ ಸ್ಮರಣೆ ಇಂದಿನ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಣಾಸಕ್ತರಿಗೆ ಪ್ರೇರಣೆಯಾಗಲಿ ಎಂದು ಹೇಳಿದರು.
ಕಲ್ಪತರು ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಮಾಜಿ ಸದಸ್ಯರು, ಸಂಸ್ಥೆ ಎಲ್ಲಾ ಸದಸ್ಯರು, ಕಲ್ಪತರು ವಿದ್ಯಾಸಂಸ್ಥೆ ಸಂಸ್ಥಾಪಕ ಪ್ರಾಚಾರ್ಯರಾದ ಪ್ರೊ.ಜೆ.ಆರ್.ಮಹಾಲಿಂಗಯ್ಯನವರ ಪುತ್ರ ಮಹೇಶ್, ಕಲ್ಪತರು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ವರ್ಗ, ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ಪ್ರಾಚಾರ್ಯರು ಮತ್ತು ಪ್ರಾಧ್ಯಾಪಕ ವರ್ಗ, ಅಧ್ಯಾಪಕೇತರ ವರ್ಗ, ಕಲ್ಪತರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು.