ರಾಜ್ಯಮಟ್ಟದ ಜಾನಪದ ಉತ್ಸವ, ಬೃಹತ್ ರಕ್ತದಾನ ಶಿಬಿರ ಮತ್ತು ದೇಹ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು
ಇಂದಿನ ಯುವ ಜನತೆ ಯಾಂತ್ರಿಕ ಜೀವನ ಶೈಲಿ ಬದಿಗಿಟ್ಟು ಜಾನಪದಕ್ಕೆ ಶೈಲಿಯ ಬದುಕನ್ನು ಕಟ್ಟಿಕೊಳ್ಳಬೇಕು. ಜಾನಪದ ಕಲೆ ಜಾಗತೀಕರಣವಾಗಿದ್ದು, ಮಾನವೀಯ ಮೌಲ್ಯಗಳನ್ನ ಒತ್ತಿ ಹೇಳುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನ ಆವರಣದ ಗಣೇಶೋತ್ಸವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೌರಭ ಜಾನಪದ ಕಲಾವೇದಿಕೆ ಮತ್ತು ಕಾಕಿ ಜನಸೇವಾ ಸಂಸ್ಥೆ ಸಹಯೋಗದಲ್ಲಿ ದಿ.ದೊಡ್ಡನಾಗಪ್ಪ ತಿರಕಪ್ಪ ಕಾಕಿ ಹಾಗೂ ದಿ.ಸಣ್ಣನಾಗಪ್ಪ ತಿರಕಪ್ಪ ಕಾಕಿ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜಾನಪದ ಉತ್ಸವ, ಬೃಹತ್ ರಕ್ತದಾನ ಶಿಬಿರ ಮತ್ತು ದೇಹ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಗ್ರಾಮೀಣ ಕಲೆಗಳು ಜನರ ಉಸಿರಾಗಬೇಕು. ನಮ್ಮ ಸಂಸ್ಕೃತಿ, ಪರಂಪರೆ ಉಳಿವಿಗೆ ಸಂಘ-ಸಂಸ್ಥೆಗಳು ಮುಂದಾಗಬೇಕು ಎಂದರು.
ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಅಧ್ಯಕ್ಷತೆ ವಹಿಸಿದ್ದರು.